ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?
ಮೈಸೂರು

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎ.ಎಚ್.ವಿಶ್ವನಾಥ್?

August 3, 2018

ಬೆಂಗಳೂರು: ಜಾತ್ಯಾತೀತ ಜನತಾದಳ ರಾಜ್ಯಾ ಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್. ವಿಶ್ವನಾಥ್ ನೇಮಕಗೊಳಿಸಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದು, ಆ.5ಕ್ಕೆ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶ್ವನಾಥ್ ಅವರನ್ನು ನೂತನ ರಾಜಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಉದ್ದೇಶಿಸಿದ್ದು, ಖುದ್ದು ದೇವೇಗೌಡರೇ ವಿಶ್ವನಾಥ್ ಅವರೊಂದಿಗೆ ಮಾತುಕತೆ ಕೂಡ ನಡೆಸಿದ್ದಾರೆ. ಆಗಸ್ಟ್ 5ರಂದು ನೂತನ ರಾಜ್ಯಾಧ್ಯಕ್ಷರ ನೇಮಕದ ಅಧಿಕೃತ ಘೋಷಣೆ ಹೊರಬೀಳಲಿದೆ.

ಪ್ರಸ್ತುತ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಎಚ್.ಡಿ.ಕುಮಾರಸ್ವಾಮಿ, ಇದೀಗ ರಾಜ್ಯದ ಮುಖ್ಯಮಂತ್ರಿ ಯಾಗಿರುವ ಕಾರಣ ಎಚ್.ವಿಶ್ವನಾಥ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲು ದೇವೇಗೌಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡರು ಇದರ ಬಗ್ಗೆ ತಮ್ಮಲ್ಲಿ ಪ್ರಸ್ತಾಪಿಸಿದ್ದರು. ಆದರೆ ತಾವೂ ಈ ವಿಚಾರದಲ್ಲಿ ಮಾತನಾಡುವುದಾಗಿ ಹೇಳಿದ್ದು, ಒಂದು ವೇಳೆ ಆ ಸ್ಥಾನಕ್ಕೆ ನನ್ನನ್ನು ನೇಮಕ ಮಾಡಿದರೆ, ಅವರ ಪ್ರೀತಿ ವಿಶ್ವಾಸ, ನಂಬಿಕೆಗೆ ಬದ್ಧನಾಗಿ ಒಪ್ಪಿಕೊಳ್ಳುವುದಾಗಿ ವಿಶ್ವನಾಥ್ ‘ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ.

Translate »