ಕೊಡಗಿಗೆ 12 ತಂತ್ರಜ್ಞರೊಂದಿಗೆ ಎ.ಹೆಚ್.ವಿಶ್ವನಾಥ್ ಭೇಟಿ
ಕೊಡಗು

ಕೊಡಗಿಗೆ 12 ತಂತ್ರಜ್ಞರೊಂದಿಗೆ ಎ.ಹೆಚ್.ವಿಶ್ವನಾಥ್ ಭೇಟಿ

August 27, 2018

ಜಿಲ್ಲೆ ಪುನರ್‍ನಿರ್ಮಾಣ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ಧಾರ
ಮಡಿಕೇರಿ: ಸತತ ಮಳೆಯಿಂದ ಕಂಗಾಲಾಗಿರುವ ಕೊಡಗು ಜಿಲ್ಲೆಯನ್ನು ಪುನರ್ ನಿರ್ಮಾಣ ಮಾಡುವ ಕುರಿತು ಊಹಾಪೋಹದ ವರದಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಶಾಸಕ ಎ.ಹೆಚ್. ವಿಶ್ವನಾಥ್ ನೇತೃತ್ವ ದಲ್ಲಿ 12 ತಂತ್ರಜ್ಞರ ತಂಡ ಮಡಿಕೇರಿಗೆ ಭೇಟಿ ನೀಡಿ ಮಾಹಿತಿ ಪಡೆದಿದೆ.

ಮಳೆಯ ರುದ್ರನರ್ತನದಿಂದ ಕಂಗೆಟ್ಟ ಕೊಡಗು ಜಿಲ್ಲೆಯನ್ನು ಪುನರ್ ನಿರ್ಮಾಣ ಕಾರ್ಯ ಹೇಗೆ ನಡೆಯಬೇಕು? ಈಗಿನ ಪರಿಸ್ಥಿತಿಗೆ ಏನು ಕಾರಣ? ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾಗ ದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮ ವೇನು? ವಾಸ್ತವವಾಗಿ ಕೊಡಗಿನ ಪುನರ್ ನಿರ್ಮಾಣ ಕಾರ್ಯಕ್ಕೆ ಆಗುವ ವೆಚ್ಚವೆಷ್ಟು? ಎಂಬುದರ ಕುರಿತು ಈ ತಂಡ ಸರ್ಕಾರಕ್ಕೆ ಕೂಲಂಕುಶ ವರದಿ ನೀಡಲಿದೆ.

ಈಗಾಗಲೇ ಕೊಡಗು ಜಿಲ್ಲೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ಊಹಾಪೋಹದ ವರದಿಗಳು ಪ್ರಕಟವಾಗು ತ್ತಿದ್ದು, ಇದಕ್ಕಾಗಿ ಎರಡು ಸಾವಿರ ಕೋಟಿ ರೂ. ಬೇಕು, ಮೂರು ಸಾವಿರ ಕೋಟಿ ರೂ. ಬೇಕು ಎಂಬಂತಹ ವರದಿಗಳು ಪ್ರಕಟ ವಾಗುತ್ತಿವೆ. ಆದರೆ, ಈ ವಿಷಯದಲ್ಲಿ ವಾಸ್ತವವಾಗಿ ಆಗಬೇಕಿರುವ ವೆಚ್ಚ ಎಷ್ಟು ಅನ್ನುವ ಕುರಿತು ತಜ್ಞರ ತಂಡ ತನ್ನ ವರದಿಯಲ್ಲಿ ದಾಖಲಿಸಲು ಈ ತಂಡ ಅಭಿಪ್ರಾಯಪಟ್ಟಿದೆ.

ಜಲಪ್ರಳಯದಿಂದ ತತ್ತರಿಸಿರುವ ಕೊಡಗು ಜಿಲ್ಲೆಯನ್ನು ಪುನರ್ ನಿರ್ಮಾಣ ಸಂಬಂಧ ವಸ್ತುಸ್ಥಿತಿಯ ವರದಿಯನ್ನು ಮುಂದಿನ ಹತ್ತು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಸುವು ದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ನೇತೃತ್ವದಲ್ಲಿ ರೂಪುಗೊಂಡಿ ರುವ ನಿವೃತ್ತ ಇಂಜಿನಿಯರ್‍ಗಳ ಪರಿಣಿ ತರ ತಂಡ ನಿರ್ಧರಿಸಿದೆ. ಹಾನಿಗೊಳ ಗಾದ ಕೊಡಗನ್ನು ಬೇಕಾಬಿಟ್ಟಿ ನಿರ್ಮಾಣ ಮಾಡದೇ ಗುಣಮಟ್ಟದ ಕಾಮಗಾರಿಗಳೊಂ ದಿಗೆ ಸುಂದರ ಕೊಡಗಿನ ನಿರ್ಮಾಣಕ್ಕೆ ಎಲ್ಲರೂ ಸಂಕಲ್ಪ ತೊಡಬೇಕೆಂದೂ ವಿಶ್ವನಾಥ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಶ್ರೀವಿದ್ಯಾ ಮಾತನಾಡಿ, ಕುಸಿದು ಬಿದ್ದಿರುವ ಮಡಿಕೇರಿ-ಸುಳ್ಯ ರಾಷ್ಟ್ರೀಯ ಹೆದ್ದಾರಿ ಮತ್ತು ಮಡಿಕೇರಿ -ಸೋಮವಾರಪೇಟೆ ರಸ್ತೆಯನ್ನು ಮೊದಲು ಸಂಪರ್ಕ ರಸ್ತೆಯನ್ನಾಗಿ ಮರುನಿರ್ಮಾಣ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ತಜ್ಞರ ತಂಡಕ್ಕೆ ದ್ರೋಣ್ ಕ್ಯಾಮರ, ತಾಂತ್ರಿಕ ನೆರವು ನೀಡಲು ಜಿಲ್ಲಾಡಳಿತ ಸಿದ್ದವಿದೆ ಎಂದು ಭರವಸೆ ನೀಡಿದರು.

ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ಕೊಡಗನ್ನು ಮರು ನಿರ್ಮಾಣ ಮಾಡುವ ಸಂದರ್ಭ ಶಾಶ್ವತವಾದ ಕೆಲವೊಂದು ತಾಂತ್ರಿಕ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ. ಯಾವುದೇ ಕಾರಣಕ್ಕೂ ಹಾನಿಗೊಳಗಾದ ಕೊಡಗನ್ನು ತರಾತುರಿಯಿಂದ ಬೇಕಾಬಿಟ್ಟಿ ಮರುನಿರ್ಮಾಣ ಮಾಡಬಾರದು. ಬದ ಲಿಗೆ, ಗುಣಮಟ್ಟದ ಕಾಮಗಾರಿಯೊಂದಿಗೆ ಸುಂದರ ಕೊಡಗು ನಿರ್ಮಾಣ ಆಗ ಬೇಕಾಗಿದೆ. ನೂರಾರು ವರ್ಷಗಳಿಗೂ ನಲುಗಿಹೋಗದಂಥ ಕೊಡಗನ್ನು ಗುಣಮಟ್ಟದ ಕಾಮಗಾರಿಗಳಿಂದ ರೂಪಿಸಬೇಕಾಗಿದೆ. ಹೀಗಾಗಿಯೇ ಅತ್ಯಂತ ಪರಿಣಿತ ಇಂಜಿನಿಯರ್‍ಗಳ ತಂಡವನ್ನು ಆಯ್ಕೆ ಮಾಡಿ ಅವರ ಸೇವೆಯನ್ನು ಕೊಡಗು ನಿರ್ಮಾಣದ ನಿಟ್ಟಿನಲ್ಲಿ ಉಚಿತವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದರು.

ಕೊಡಗಿನ ಪ್ರವಾಸೋದ್ಯಮವೂ ನಲುಗಿ ಹೋಗಿದ್ದು ಕೊಡಗಿನ ಆರ್ಥಿಕ ಶಕ್ತಿಯನ್ನು ಮತ್ತೆ ಬಲಗೊಳಿಸಬೇಕಾಗಿದೆ ಎಂದು ಹೇಳಿದ ವಿಶ್ವನಾಥ್, ನೂರಾರು ವರ್ಷಗಳ ಕಾಲ ಈ ನೆಲದಲ್ಲಿ ಜೀವನ ಕಂಡುಕೊಂಡವರಿಗೆ ಮತ್ತೆ ಅವರ ನೆಲವನ್ನು ಸದೃಢವಾಗಿ ನಿರ್ಮಿಸಿಕೊಡ ಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಕೆ.ಎಂ.ಬಿ.ಗಣೇಶ್, ಹೆಚ್ಚುವರಿ ವಿಶೇಷ ಜಿಲ್ಲಾಧಿಕಾರಿ ಸತೀಶ್ ಸೇರಿದಂತೆ ಇಂಜಿನಿಯರ್‍ಗಳ ತಂಡ ಸಭೆಯಲ್ಲಿ ಪಾಲ್ಗೊಂಡಿತ್ತು.

Translate »