ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ
ಮೈಸೂರು

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ

August 6, 2018

ಬೆಂಗಳೂರು: ಹಿರಿಯ ರಾಜ ಕೀಯ ಮುತ್ಸದ್ಧಿ, ಮಾಜಿ ಸಂಸದ, ಹುಣಸೂರು ಶಾಸಕ ಅಡಗೂರು ಹೆಚ್. ವಿಶ್ವನಾಥ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಹೆಚ್.ಡಿ.ದೇವೇಗೌಡ ಮತ್ತು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವನಾಥ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ರಾಜ್ಯಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರಿಸಿದರು.

ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ನಂತರ ನಡೆದ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು.

ಈ ವೇಳೆ ಮಾತನಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇ ಗೌಡರು, ವಿಶ್ವನಾಥ್ ಅವರು ಸಂಸದರಾಗಿ, ಸಚಿವರಾಗಿ, ಅನುಭವಿ ರಾಜಕಾರಣಿಯಾಗಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ. ಆದ್ದರಿಂದ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯನ್ನು ನೀಡಲಾಗಿದೆ. ಇದರಿಂದಾಗಿ ಆ ಹುದ್ದೆಗೂ ಗೌರವ ಬಂದಿದೆ. ಮೈಸೂರು ಭಾಗದಲ್ಲಿ ನಮ್ಮ ಪಕ್ಷಕ್ಕೂ ವಿಶೇಷ ಶಕ್ತಿ ಬಂದಿದೆ. ಅಪ್ಪ-ಮಕ್ಕಳ ಪಕ್ಷ ಎಂದು ಟೀಕಿಸುತ್ತಿದ್ದವರಿಗೂ ತಕ್ಕ ಉತ್ತರ ನೀಡಲಾಗಿದೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಎ.ಹೆಚ್.ವಿಶ್ವನಾಥ್ ಅವರು, ದೊಡ್ಡವರು ನನಗೆ ಜವಾಬ್ದಾರಿಯುತವಾದ ಹುದ್ದೆ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ನಾನು ಆಭಾರಿ ಯಾಗಿದ್ದೇನೆ. ಎಲ್ಲರನ್ನೂ ಜೊತೆಗೂಡಿಸಿಕೊಂಡು ಅವರು ಕೊಟ್ಟಿರುವ ಜವಾಬ್ದಾರಿ ಯನ್ನು ನಿಭಾಯಿಸುತ್ತೇನೆ. ಉಸಿರಿರುವವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ. ನಮ್ಮ ಸರ್ಕಾರದ ತೀರ್ಮಾನಗಳನ್ನು ಜನತೆಯ ಮುಂದೆ ಕೊಂಡೊಯ್ಯುತ್ತೇನೆ ಎಂದು ಹೇಳಿದರು.

Translate »