ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಅಃI ದಾಳಿ
News

ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಅಃI ದಾಳಿ

December 20, 2022

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆ ಸಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್‍ಎಜುಕೇಶನ್ ಫೌಂಡೇಷನ್ ಮೇಲೆ ದಾಳಿ ನಡೆದಿದೆ.

ಸದ್ಯ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿ ಗಾಲದ ಅಧಿವೇಶನದಲ್ಲಿ ಭಾಗವಹಿಸಿದ್ದು, ಇದೇ ಸಂದರ್ಭದಲ್ಲಿ ಇತ್ತ ಬೆಂಗಳೂರಿ ನಲ್ಲಿ ಸಿಬಿಐ ದಾಳಿ ನಡೆಸಿದೆ. ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ.

ಈ ಹಿಂದೆ ಕೂಡ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿ ಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬಂಧ ಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ. ಡಿಕೆ ಶಿವಕುಮಾರ್ ಅವರು ನ್ಯಾಷನಲ್ ಎಜುಕೇಶನ್ ಫೌಂಡೇಶನ್ ಸಂಸ್ಥೆಯ ಛೇರ್ಮನ್ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯ ದರ್ಶಿಯಾಗಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ.

ದಾಳಿ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿ0iÉು ನೀಡಿರುವ ಡಿಕೆ ಶಿವಕುಮಾರ್, ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿ ಗಳನ್ನು ಭೇಟಿ ಮಾಡಿ, ಕೆಲವು ದಾಖಲೆ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶೀಲ್ದಾರ್ ಅವರಿಂದ ಮಾಹಿತಿಯನ್ನು ಪಡೆದುಕೊಂಡಿ ದ್ದಾರೆ. ನನ್ನ ವಿರುದ್ದ ಕೇಸ್‍ಗಳು ನಡೆಯು ತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದರೆ ನೀಡುತ್ತಿದ್ದಾರೆ ಎಂದು ಹೇಳಿದರು.

ಸಿಬಿಐ ದಾಳಿಯಿಂದ ನನಗೆ ಯಾವುದೇ ಭಯವಿಲ್ಲ, ನಾನು ತಪ್ಪು ಮಾಡಿಲ್ಲ. ಹೆಚ್. ವಿಶ್ವನಾಥ್ ಬಗ್ಗೆ ಇತ್ತೀಚೆಗೆ ಹಣಕಾಸಿನ ಬಗ್ಗೆ ರಾಜಾರೋಷವಾಗಿ ಹೇಳಿದ್ದರು ಕೂಡ ಯಾರು ಈ ಬಗ್ಗೆ ಮಾತನಾಡಿಲ್ಲ. ಇದಲ್ಲದೇ ವಿರೋಧಿ ಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಬಿಜೆಪಿ ಮುಂದಾಗಿದ್ದು, ಈ ಬಗ್ಗೆ ನ್ಯಾಯಾಲಯ ಜನತೆಗಳ ಜೊತೆಗೆ ನಾವು ಹೋಗುತ್ತೇವೆ ಎಂದು ಹೇಳಿದರು. ಎರಡು ದಿನಗಳ ಹಿಂದೆ ಮಾಧ್ಯಮಗಳ ಜೊತೆಗೆ ಕೊಪ್ಪಳ ದಲ್ಲಿ ಮಾತನಾಡಿದ್ದ ಡಿ.ಕೆ. ಶಿವಕುಮಾರ್, ಚುನಾವಣೆ ಹಿನ್ನಲೆಯಲ್ಲಿ ನನಗೆ ಸೇರಿದಂತೆ ಹಲವರಿಗೆ ಸಿಬಿಐ ತೊಂದರೆ ಕೊಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

Translate »