ಕಟ್ಟಡ ಕಾರ್ಮಿಕರಿಗೆ ನೆರವು ಶ್ಲಾಘನೀಯ
ಮಂಡ್ಯ

ಕಟ್ಟಡ ಕಾರ್ಮಿಕರಿಗೆ ನೆರವು ಶ್ಲಾಘನೀಯ

July 17, 2021

ಮಂಡ್ಯ, ಜು.16(ಮೋಹನ್‍ರಾಜ್)- ಕೋವಿಡ್ ಸಂಕಷ್ಟದ ಸಮಯದಲ್ಲಿ ಕಟ್ಟಡ ಕಾರ್ಮಿಕರು ಕಳೆದ 16 ತಿಂಗಳಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಅವರ ಕಷ್ಟಕ್ಕೆ ಸರ್ಕಾರ ಧಾವಿಸಬೇಕೆಂದು ರಾಜ್ಯ ಉಚ್ಚ ನ್ಯಾಯಾ ಲಯ ಸೂಚನೆ ನೀಡಿರುವುದು ಶ್ಲಾಘ ನೀಯ ವಿಚಾರ ಎಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕೋವಿಡ್-19 ಸಂಕಷ್ಟದಲ್ಲಿರುವ ನೋಂದಾಯಿತ ಕಟ್ಟಡ ಮತ್ತು ವಲಸೆ ಕಾರ್ಮಿಕ ರಿಗೆ ನಗರದ ಅಂಬೇಡ್ಕರ್ ಭವನದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡಿ ಅವರು ಮಾತನಾಡಿದರು.
ಸರ್ಕಾರ ನೋಂದಾಯಿತ ಕಟ್ಟಡ ಕಾರ್ಮಿಕ ರಿಗೆ ಅವರ ಖಾತೆಗೆ ತಲಾ 3000 ಹಾಗೂ ಆಹಾರ ಕಿಟ್ ವಿತರಣೆ ಮಾಡಲಾಗುತ್ತಿದೆ. ವಿಧಾನಪರಿಷತ್ ಸದಸ್ಯರಿಗೆ ನೀಡುವ 2000 ಆಹಾರ ಕಿಟ್‍ನಲ್ಲಿ ಮಂಡ್ಯ ನಗರದ ಕಟ್ಟಡ ಕಾರ್ಮಿಕರಿಗೆ 1000 ಕಿಟï, ಕೆರಗೋಡು ಹೋಬಳಿ ಹಾಗೂ ಕೊಪ್ಪ ಹೋಬಳಿಯ ಕಟ್ಟಡ ಕಾರ್ಮಿಕರಿಗೆ ತಲಾ 500 ಆಹಾರ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದರು.

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆ ಗಳಿದ್ದು, ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸುವ ಮೂಲಕ ಕಾರ್ಮಿಕ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಳ್ಳಿ ಎಂದರು.

ಕೋವಿಡ್ ಮೂರನೆಯ ಅಲೆ ಬಗ್ಗೆ ಎಚ್ಚರಿಕೆಯಿಂದಿರಬೇಕು. ಪ್ರತಿಯೊಬ್ಬರು   ಸ್ಯಾನಿಟೈಸ್, ಮಾಸ್ಕ್, ಸಾಮಾಜಿಕ ಅಂತರ ಪಾಲಿಸುವ ಮೂಲಕ ಸರ್ಕಾರದ ನಿರ್ದೇ ಶನವನ್ನು ಪಾಲಿಸಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ತಮ್ಮ ಅನು ದಾನದಲ್ಲಿ ಮದ್ದೂರು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಬೆಕ್ಕಳಲೆ ಗಾಂಧಿ ಕಾಲೇಜು ಹಾಗೂ ಸರ್ವೋದಯ ಕಾಲೇಜಿಗೆ ಕಂಪ್ಯೂಟರನ್ನು ವಿತರಿಸಿದರು.

ವೇದಿಕೆಯಲ್ಲಿ ಶಾಸಕ ಎಂ.ಶ್ರೀನಿವಾಸ್, ದಲಿತ ಮುಖಂಡ ಎಂ.ಬಿ.ಶ್ರೀನಿವಾಸ್ ಸೇರಿ ದಂತೆ ಕಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

Translate »