ನವದೆಹಲಿ: ಚೀನಾದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ 800ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದು ಕೊಂಡಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷರಿಗೆ ಪತ್ರ ಬರೆದು ಕೊರೋನಾ ವೈರಸ್ ವಿರುದ್ಧ ಹೋರಾಡಲು ಭಾರತ ನೆರವು ನೀಡುತ್ತದೆ ಎಂದು ತಿಳಿಸಿದ್ದಾರೆ.
ಚೀನಾ ಅಧ್ಯಕ್ಷ ಷಿ.ಜಿನ್‍ಪಿಂಗ್ ಅವರಿಗೆ ಬರೆದ ಪತ್ರದಲ್ಲಿ, ಚೀನಾದಲ್ಲಿ ಈಗ ಎದು ರಾಗಿರುವ ಪರಿಸ್ಥಿತಿಯನ್ನು ಎದುರಿಸಲು ಭಾರತ ನೆರವು ನೀಡುತ್ತದೆ. ಏಕಾಏಕಿ ಸಂಭವಿಸಿದ ಕೊರೋನಾ ವೈರಸ್‍ನ ದುರ ದೃಷ್ಟಕರ ಎಂದು ಮೋದಿ ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಕೊರೊನಾ ವೈರಸ್‍ನ ತೀವ್ರ ಹೊಡೆತಕ್ಕೆ ಸಿಲುಕಿರುವ ಹುಬೆ ಪ್ರಾಂತ್ಯದಿಂದ ಈ ತಿಂಗಳ ಆರಂಭ ದಲ್ಲಿ ಭಾರತೀಯರನ್ನು ಸ್ಥಳಾಂತರಿಸಲು ನೆರವು ನೀಡಿದ ಚೀನಾ ಸರ್ಕಾರದ ಕಾರ್ಯಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೊರೋನಾ ವೈರಸ್ ಪತ್ತೆಗಾಗಿ ಭಾರ ತವು ಹಲವಾರು ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ನೇಪಾಳದ ಗಡಿ ಚೆಕ್ ಪಾಯಿಂಟ್‍ಗಳಲ್ಲಿ ಬೃಹತ್ ಸ್ಕ್ರೀನಿಂಗ್ ಸೌಲಭ್ಯಗಳನ್ನು ಇಟ್ಟಿದೆ. ಇನ್ನು ಕೇರಳ ದಲ್ಲಿ ಮೂವರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು.