ಬೆಂದ ಬಂಡೀಪುರದಲ್ಲಿ  ಸಿಎಂ ವೈಮಾನಿಕ ಸಮೀಕ್ಷೆ
ಚಾಮರಾಜನಗರ

ಬೆಂದ ಬಂಡೀಪುರದಲ್ಲಿ  ಸಿಎಂ ವೈಮಾನಿಕ ಸಮೀಕ್ಷೆ

February 28, 2019

ಗುಂಡ್ಲುಪೇಟೆ: ಕಳೆದ ಆರು ದಿನಗಳಿಂದ ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾದ ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶಗಳಿಗೆ ಬುಧವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರವಾಸೋ ದ್ಯಮ ಸಚಿವ ಸಾ.ರಾ. ಮಹೇಶ್ ವೈಮಾ ನಿಕ ಸಮೀಕ್ಷೆ ನಡೆಸಿದರು.

ಮಧ್ಯಾಹ್ನ 12.30ರ ವೇಳೆಗೆ ಬೆಂಗ ಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು ಹುಲಿ ಯೋಜನೆಯ ವ್ಯಾಪ್ತಿಯಲ್ಲಿನ ಕಾಡ್ಗಿಚ್ಚಿ ನಿಂದ ಹೆಚ್ಚು ಹಾನಿಗೊಳಗಾಗಿರುವ ಹಿಮ ವದ್ ಗೋಪಾಲಸ್ವಾಮಿಬೆಟ್ಟ, ಮದ್ದೂರು ಅರಣ್ಯ ವಲಯ, ಮೂಲೆಹೊಳೆ ಅರಣ್ಯ ಹಾಗೂ ಕರಡಿಬೆಟ್ಟ ಅರಣ್ಯ ವಲಯ, ಕುಂದಕೆರೆ ಅರಣ್ಯ ವಲಯದಲ್ಲಿನ ಪ್ರದೇಶ ಗಳಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಸಂಚರಿಸಿ ವೈಮಾನಿಕ ಸಮೀಕ್ಷೆ ನಡೆಸಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮುಖಾಂತರ ಆಗಮಿಸಿದ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆಯನ್ನು ಮುಗಿಸಿ ನಂತರ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು. ಫೆ.24ರಂದು ಅರಣ್ಯ ಸಚಿವ ಸತೀಶ್ ಜಾರಕಿಹೋಳಿ ಭೇಟಿ ನೀಡಿ ಪರಿಶೀಲಿ ಸಿದ ನಂತರ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ವಾಯುಸೇನೆಯ ಎರಡು ಹೆಲಿಕಾಪ್ಟರ್ ಮೂಲಕ ಬೆಂಕಿ ನಂದಿಸಲು ಆದೇಶ ನೀಡಿ ದ್ದರು. ಸತತ ಎರಡು ದಿನಗಳ ಕಾರ್ಯಾ ಚರಣೆ ನಂತರ ಬೆಂಕಿಯು ನಿಯಂತ್ರಣಕ್ಕೆ ಬಂದಿದೆ. ಆದರೆ ಅಪರೂಪದ ಜೀವ ವೈವಿಧ್ಯಗಳು ಮತ್ತು ಅಪಾರ ಪ್ರಮಾಣದ ವನ್ಯ ಸಂಪತ್ತು ಬೆಂಕಿಯಲ್ಲಿ ಭಸ್ಮವಾಗಿದೆ.

ಫೆ. 21ರ ಸಂಜೆ ಹುಲಿಯೋಜನೆಯ ಕುಂದಕೆರೆ ವಲಯದ ಲೊಕ್ಕೆರೆ ಪ್ರದೇಶಕ್ಕೆ ಬಿದ್ದ ಬೆಂಕಿಯು ಸತತ 6 ದಿನಗಳ ಕಾಲ ನಿಯಂತ್ರಣಕ್ಕೆ ಬರದೆ ಸಮೀಪದ ಹಿಮ ವದ್ ಗೋಪಾಲಸ್ವಾುಬೆಟ್ಟ, ಬಂಡೀಪುರ. ಮದ್ದೂರು ಹಾಗೂ ಮೂಲೆಹೊಳೆ ವಲಯಗಳಿಗೂ ಹರಡಿತ್ತು. ಸತತ ಆರು ದಿನಗಳ ಕಾಲ ಬೆಂಕಿ ನಂದಿಸಲು ನಡೆದ ಪ್ರಯತ್ನಗಳು ಸಫಲವಾಗದೆ ಸುಮಾರು 20 ಸಾವಿರ ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ. ಇದಲ್ಲದೇ ಗೋಪಾಲಸ್ವಾಮಿ ಬೆಟ್ಟ ಮೇಲಿರುವ ಗುಡ್ಡಗಳಿಗೆ ಮಾನವರು ಹೋಗಿ ಬೆಂಕಿ ನಂದಿಸಲು ಅಸಾಧ್ಯವೆಂದು ಅರಿತು ವಾಯುಸೇನೆಯ ಹೆಲಿಕಾಪ್ಟರ್ ಅವಿರತವಾಗಿ ಫೆ.24, 25 ಹಾಗೂ 26ರಂದು ನೀರು ಸಿಂಪಡಿಸುವ ಮೂಲಕ ತಮ್ಮ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಿ ಬೆಂಕಿ ನಂದಿಸಿದವು.

ಶಾಂತವಾದ ಬಂಡೀಪುರ: ಕಳೆದ ಆರು ದಿನಗಳಿಂದ ತನ್ನ ರುದ್ರನರ್ತನವನ್ನು ತೋರಿಸಿದ ಬೆಂಕಿಯು ಈಗ ಸಂಪೂರ್ಣ ವಾಗಿ ಶಾಂತವಾಗಿದೆ. ಸಫಾರಿ ವಲಯ, ಹಿಮವದ್ ಗೋಪಾಲಸ್ವಾಮಿ ಬೆಟ್ಟದ ವಲಯ, ಕುಂದಕೆರೆ ಸೇರಿದಂತೆ ಬಂಡೀ ಪುರ ಅರಣ್ಯವಲಯದಲ್ಲಿ ಸಂಪೂರ್ಣ ವಾಗಿ ಬೆಂಕಿಯನ್ನು ನಂದಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಎರಡು ಹೆಲಿಕಾಪ್ಟರ್‍ಗಳು ವಾಪಸ್ ಹೋಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ಅಗ್ನಿ ಶಾಮಕ ದಳದ ವಾಹನಗಳು ಮತ್ತು ಸಿಬ್ಬಂದಿ ಗಳು, ಸ್ವಯಂ ಸೇವಕರು ಬಂಡೀಪುರ ದಲ್ಲಿನ ಆಯಕಟ್ಟಿನ ಸ್ಥಳದಲ್ಲಿ ಇದ್ದು ಬೆಂಕಿಯಿಂದ ರಕ್ಷಿಸಲು ಸಿದ್ದರಾಗಿದ್ದಾರೆ.

ನೂತನ ಸಿ.ಎಫ್ ಅಧಿಕಾರ ಸ್ವೀಕಾರ: ಬಂಡೀಪುರ ಹುಲಿಯೋಜನೆಯಲ್ಲಿ ನಿರ್ದೇ ಶಕರಾಗಿ ಪ್ರಭಾರ ಹೊಂದಿದ್ದ ಅಂಬಾಡಿ ಮಾಧವ್ ನೂತನವಾಗಿ ಹುದ್ದೆ ಅಲಂಕರಿ ಸಿದ ಬಾಲಚಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.

Translate »