ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ  ಅಧ್ಯಕ್ಷ ಸ್ಥಾನಕ್ಕೆ ಬಿ.ವಿ.ಮಂಜುನಾಥ್ ಸ್ಪರ್ಧೆ
ಮೈಸೂರು

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಬಿ.ವಿ.ಮಂಜುನಾಥ್ ಸ್ಪರ್ಧೆ

February 17, 2019

ಮೈಸೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಬಿ.ವಿ.ಮಂಜುನಾಥ್ ಸ್ಪರ್ಧಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನಿಂತ ನೀರಾಗಿದೆ. ಇದರಿಂದ ಸಮುದಾಯದ ಜನರು ಬೇಸತ್ತಿದ್ದಾರೆ. ಸಮುದಾಯದ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ. ಈಗಾಗಲೇ ಹಲವು ವರ್ಷ ಗಳಿಂದ ಮಹಾಸಭಾ ಕೇಂದ್ರ ಸಮಿತಿ ಸದಸ್ಯನಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದೇನೆ. ಅಲ್ಲದೆ, ಪ್ರತಿ ವರ್ಷ ಸಮುದಾಯದ ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂ. ವೆಚ್ಚ ಮಾಡಿ ಪಠ್ಯ ಸಾಮಗ್ರಿಗಳನ್ನು ವಿತರಿಸುತ್ತಾ ಬಂದಿದ್ದೇನೆ. ಸಮುದಾಯ ವಿಶ್ವಾಸ ಉಳಿಸಿಕೊಂಡು ಬಂದಿದ್ದು, ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೋರುತ್ತೇನೆ ಎಂದರು. (ಶನಿವಾರದ `ಮೈಸೂರು ಮಿತ್ರ’ ಸಂಚಿಕೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಬಿ.ವಿ.ಮಂಜುನಾಥ್ ಅವರ ಭಾವಚಿತ್ರದ ಬದಲು ಕಣ್ತಪ್ಪಿನಿಂದ ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ಚಿತ್ರ ಪ್ರಕಟವಾಗಿತ್ತು. ಇದಕ್ಕಾಗಿ ವಿಷಾದಿಸುತ್ತೇವೆ.).

Translate »