ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂಪಾಷ ಮರು ನಿಯೋಜನೆ
ಹಾಸನ

ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂಪಾಷ ಮರು ನಿಯೋಜನೆ

May 30, 2019

ಹಾಸನ: ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಅವರನ್ನು ಮರು ನಿಯೋಜನೆÉ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವರ್ಗಾವಣೆಗೊಂಡಿದ್ದ ಅಕ್ರಂಪಾಷ ಮತ್ತೆ ಹಾಸನ ಜಿಲ್ಲಾಧಿಕಾರಿ ಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸ್ಥಳೀಯ ಸಂಸ್ಥೆಯ ಚುನಾವಣೆಯ ಪ್ರಕ್ರಿಯೆ ಮುಕ್ತವಾದ ಬಳಿಕ ಅಧಿಕಾರ ವಹಿಸಿ ಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇನ್ನೂ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ಯಾವುದೇ ಸ್ಥಳ ತೋರಿಸಿಲ್ಲ.

ಬಿಜೆಪಿ ಮುಖಂಡರ ದೂರಿನ ಅನ್ವಯ ಅಕ್ರಂಪಾಷ ಅವರನ್ನು ಚುನಾವಣಾ ಆಯೋಗದ ನಿರ್ದೇನದ ಮೇರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿತ್ತು.

Translate »