ಕಾಬುಲ್:ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ, ಸೆ.11, 2001ರ ಅಮೆರಿಕಾ ವಿಶ್ವ ವಾಣಿಜ್ಯ ಸಂಸ್ಥೆ ಮೇಲಿನ ದಾಳಿಯ ಮಾಸ್ಟರ್‍ಮೈಂಡ್ ಅಲ್-ಕೈದಾ ಮುಖ್ಯಸ್ಥ ಆಯ್ಮಾನ್ ಅಲ್-ಜವಾಹಿರಿಯನ್ನು ಅಮೆರಿಕ ಹತ್ಯೆ ಮಾಡಿದೆ.
9/11 ದಾಳಿ ನಡೆದ ಬರೋಬ್ಬರಿ 21 ವರ್ಷಗಳ ಬಳಿಕ ಅಫ್ಘಾನಿಸ್ತಾನದ ರಾಜ ಧಾನಿ ಕಾಬೂಲ್‍ನಲ್ಲಿ ನಡೆಸಿದ ಡ್ರೋನ್ ದಾಳಿಯಲ್ಲಿ ಜವಾಹಿರಿಯನ್ನು ಕೊಲೆಗೈಯು ವಲ್ಲಿ ಅಮೆರಿಕ ಯಶಸ್ವಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಘೋಷಿ ಸಿದ್ದಾರೆ. ಸುದ್ದಿ ವಾಹಿನಿಯಲ್ಲಿ ಮಾತನಾ ಡಿದ ಬೈಡನ್, ಶನಿವಾರ ಕಾಬೂಲ್‍ನಲ್ಲಿ ನಡೆಸಲಾದ ದಾಳಿಯಲ್ಲಿ ಜವಾಹಿರಿ ಹತನಾಗಿದ್ದಾನೆ ಎಂದು ಹೇಳಿದ್ದಾರೆ. ಆತನ ವಿರುದ್ಧದ ಕಾರ್ಯಾಚರಣೆಗೆ ಅಂತಿಮ ಅನುಮೋದನೆ ನೀಡಿದ್ದೆ. ದಾಳಿಯಲ್ಲಿ ನಾಗರಿಕರ ಹತ್ಯೆಯಾಗಿಲ್ಲ. ಇದೀಗ ನ್ಯಾಯ ಒದಗಿಸಲಾಗಿದೆ. ಉಗ್ರ ಸಂಘಟನೆ ನಾಯಕ ಇನ್ನಿಲ್ಲ ಎಂದು ಬೈಡನ್ ಹೇಳಿದ್ದಾರೆ.
ನಮಗೆ ಹಾನಿ ಮಾಡಲು ಬಯಸುವವರ ವಿರುದ್ಧ ಅಮೆರಿಕಾದ ಜನರನ್ನು ರಕ್ಷಿಸುವ ನಮ್ಮ ಸಂಕಲ್ಪ ಮತ್ತು ನಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವುದನ್ನು ಮುಂದುವರೆಸಿದ್ದೇವೆ. ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ. ನೀವು ಎಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ಸರಿ, ನಾವು ನಿಮ್ಮನ್ನು ಬಿಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದೇವೆ ಎಂದು ಜೋ ಬೈಡನ್ ಗುಡುಗಿದ್ದಾರೆ. ಕಾಬೂಲ್‍ನ ನಿವಾಸದ ಬಾಲ್ಕನಿಯಲ್ಲಿ ಝವಾಹಿರಿಯನ್ನು ಡ್ರೋನ್ ದಾಳಿಯ ಮೂಲಕ ಹತ್ಯೆ ಮಾಡಲಾಗಿದೆ. ಅಫ್ಘಾನಿಸ್ತಾನ ದಲ್ಲಿ ನಮ್ಮ ಪಡೆಗಳು ಈಗ ಇಲ್ಲ ಎಂದು ಅಮೆರಿಕ ಆಡಳಿತದ ಹಿರಿಯ ಅಧಿಕಾರಿ ಯೊಬ್ಬರು ಮಾಹಿತಿ ನೀಡಿದ್ದಾರೆ. ಝವಾಹಿರಿಯು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‍ನಲ್ಲಿ ಇರುವುದು 2020ರಲ್ಲಿ ದೋಹಾದಲ್ಲಿ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂದರ್ಭದಲ್ಲಿ ತಾಲಿಬಾನ್ ಜತೆ ಮಾಡಿಕೊಂಡಿದ್ದ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ. 2021ರ ಆಗಸ್ಟ್ 31ರಂದು ಅಮೆರಿಕದ ಪಡೆಗಳು ಅಫ್ಘಾನಿಸ್ತಾನದಿಂದ ವಾಪಸಾದ ಬಳಿಕ ಅಮೆರಿಕವು ಅಲ್ಲಿ ನಡೆಸಿದ ಮೊದಲ ದಾಳಿ ಇದಾಗಿದೆ. ಮೂಲತಃ ಈಜಿಪ್ಟ್‍ನವನಾಗಿದ್ದ ಜವಾಹಿರಿ ಕೈರೊದಲ್ಲಿ ಬಾಲ್ಯ ಕಳೆದಿದ್ದ. ವೃತ್ತಿಯಲ್ಲಿ ಶಸ್ತ್ರಚಿಕಿತ್ಸಕನಾಗಿದ್ದ ಆತ ನಂತರ ಹಿಂಸಾತ್ಮಕ ಮೂಲಭೂತ ವಾದದಲ್ಲಿ ತೊಡಗಿಸಿಕೊಂಡಿದ್ದ. 2001ರ ಸೆಪ್ಟೆಂಬರ್ 11ರ ದಾಳಿ ಬಳಿಕ ತಲೆಮರೆ ಸಿಕೊಂಡಿದ್ದ. ಒಸಾಮಾ ಬಿನ್ ಲಾಡೆನ್‍ನಲ್ಲಿ ಅಮೆರಿಕದ ವಿಶೇಷ ಪಡೆಗಳು 2011ರಲ್ಲಿ ಹತ್ಯೆ ಮಾಡಿದ ಬಳಿಕ ಅಲ್‍ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಝವಾಹಿರಿ. ಆತನ ಸುಳಿವು ನೀಡಿದವರಿಗೆ 2.5 ಕೋಟಿ ಡಾಲರ್ ಇನಾಮು ಘೋಷಿಸಲಾಗಿತ್ತು.