ಹಾಸನ: ಅಖಿಲ ಭಾರತ ವೀರಶೈವ ಮಹಾಸಭೆ ಚುನಾವಣೆಯು ಫೆ.10ಕ್ಕೆ ಹಾಸನ ಜಿಲ್ಲೆಯ 8 ತಾಲೂಕುಗಳಲ್ಲೂ ನಡೆಯಲಿದೆ ಎಂದು ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಕಟ್ಟಾಯ ಶಿವಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಅವರು ಮಾತನಾಡಿ, 5 ವರ್ಷದ ಅವಧಿಗೆ ನಡೆಯುವ ಅಖಿಲ ಭಾರತ ವೀರಶೈವ ಮಹಾ ಸಭೆ ಚುನಾವಣೆಗೆ ಜ.23ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿ 29ರ ಮಧ್ಯಾಹ್ನ 3 ಗಂಟೆವರೆಗೂ ನಾಮಪತ್ರ ಕೊನೆಯ ದಿನಾಂಕವಾಗಿದೆ. ಜನವರಿ 30ರ ಬೆಳಿಗ್ಗೆ 10.30ಕ್ಕೆ ನಾಮಪತ್ರ ಪರಿಶೀಲನೆ, ಫೆಬ್ರವರಿ 2 ರಂದು ಮಧ್ಯಾಹ್ನ 3 ಗಂಟೆಗೆ ನಾಮ ಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದ್ದು, ಫೆ.10 ರಂದು ಹಾಸನ ತಾಲೂಕಿನ ಮತದಾನವು ನಗರದ ಶ್ರೀ ಅರಳೇಪೇಟೆ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದ ಪಕ್ಕ ದಲ್ಲಿರುವ ಪಂಚಾಚಾರ್ಯ ಮಂದಿರದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ನಡೆಯಲಿದೆ. ಇದ ರಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಯಾ ಸ್ಥಳದಲ್ಲಿ ನಡೆ ಯುವುದಾಗಿ ಹೇಳಿದರು. ಇತ್ತೀಚೆಗೆ ಲಿಂಗೈಕ್ಯರಾದ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರು ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿರುತ್ತಾರೆ ಎಂದು ಇದೇ ವೇಳೆ ಸಿದ್ಧಗಂಗಾ ಮಠದ ಸ್ವಾಮೀಜಿಯನ್ನು ನೆನಪಿಸಿಕೊಂಡರು.
ಅಖಿಲ ಭಾರತ ವೀರಶೈವ ಮಹಾಸಭೆಯ ಹಾಸನ ತಾಲೂಕು ಘಟಕಕ್ಕೆ ಚುನಾವಣೆ ಘೋಷಣೆಯಾಗಿದ್ದು, ಉಪ-ಚುನಾ ವಣಾಧಿಕಾರಿಯಾಗಿ ಕೆ.ಎಸ್.ರಾಜಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಹಾಸನ ನಗರದ ಅರಳೇಪೇಟೆ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕಲ್ಯಾಣ ಮಂಟಪ ಕಚೇರಿಯೇ ಚುನಾವಣಾ ಕಾರ್ಯಾಲಯವಾಗಿದೆ ಎಂದು ಚುನಾವಣೆಯ ವಿವರ ನೀಡಿ ದರು. ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷ ಗುರುನಾಥ್, ಚುನಾವಣಾಧಿಕಾರಿ ರಾಜಶೇಖರ್ ಉಪಸ್ಥಿತರಿದ್ದರು.