ಸೆ.29ರಂದು ಸರ್ವ ಜನರ-ಸಂವಿಧಾನ ಸಮಾವೇಶ
ಮೈಸೂರು

ಸೆ.29ರಂದು ಸರ್ವ ಜನರ-ಸಂವಿಧಾನ ಸಮಾವೇಶ

September 26, 2019

ಮೈಸೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ/ದಸಂಸ) ವತಿಯಿಂದ ಸೆ.29ರಂದು ಸರ್ವ ಜನರ-ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಕ್ಕೆ ಮೈಸೂರಿನ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದ್ದು, ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಉದ್ಘಾಟಿಸಲಿ ದ್ದಾರೆ. ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಪುಷ್ಪ ನಮನ ಸಲ್ಲಿಸಲಿದ್ದಾರೆ. ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಕಾರ್ಯ ಬಸವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಮೈಸೂರು ವಿವಿ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಕೇಂದ್ರದ ಸಂಯೋಜಕ ಡಾ.ಪಿ.ನರೇಂದ್ರಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಮಾಜಿ ಸಚಿವರಾದ ಎ.ಹೆಚ್.ವಿಶ್ವನಾಥ್, ಜಿ.ಟಿ.ದೇವೇಗೌಡ, ಶಾಸಕ ಡಾ.ಯತೀಂದ್ರ, ಸಿ.ಅನಿಲ್ ಚಿಕ್ಕಮಾದು, ಅಶ್ವಿನ್‍ಕುಮಾರ್, ನಿವೃತ್ತ ಡಿಹೆಚ್‍ಓ ಡಾ.ಡಿ.ತಿಮ್ಮಯ್ಯ ಪಾಲ್ಗೊಳ್ಳಲಿದ್ದಾರೆ ಎಂದರು. ಬಸವಣ್ಣ, ನಂಜಪ್ಪ ಗೋಷ್ಠಿಯಲ್ಲಿದ್ದರು.

Translate »