ಕ್ರೀಡೆಯಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ
ಹಾಸನ

ಕ್ರೀಡೆಯಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ

August 29, 2018

ಅರಸೀಕೆರೆ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಗ್ರಾಮೀಣ ಕ್ರೀಡೆಗಳತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‍ಕುಮಾರ್ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರೌಢ ಶಾಲೆಯಿಂದ ನಡೆದ ಕಸಬಾ-1 ವ್ಯಾಪ್ತಿಯ ಪ್ರೌಢಶಾಲಾ ಕ್ರೀಡಾಕೂಟ ಸಮಾರಂಭದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಯಲ್ಲಿಯೂ ಹೆಚ್ಚಿನ ಆಸಕ್ತಿಯನ್ನು ವಹಿಸಬೇಕು. ಅವರಿಗೆ ಪೋಷಕರು ಹಾಗೂ ಶಿಕ್ಷಕರು ಪ್ರೋತ್ಸಾಹ ನೀಡಬೇಕು. ಇಂದಿನ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳು ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿಯನ್ನು ಮೆರೆಯಬೇಕು. ಭವಿಷ್ಯದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪಾಲ್ಗೊಂಡು ದೇಶಕ್ಕೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರೌಢಶಾಲಾ ಉಪಪ್ರಾಂಶುಪಾಲರಾದ ಭಾರತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ರೀಡಾ ಕೂಟ ಕ್ಷೇತ್ರ ಸಮನ್ವಯಾಧಿಕಾರಿ ಗಂಗಾಧರ ಸ್ವಾಮಿ, ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿ ಕಾರ್ಜುನ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕಲ್ಯಾಣ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಂ, ಕಾರ್ಯ ದರ್ಶಿ ಸದಾನಂದÀಮೂರ್ತಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸಿ.ಬಿ.ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ವೃತಿಪರ ಶಿಕ್ಷಕರ ಸಂಘದ ಅಧ್ಯಕ್ಷ ಕೃಪಾ ಕರ್, ದೈಹಿಕ ಶಿಕ್ಷಕಿ ಗುಣವತಿ ಇದ್ದರು.

Translate »