ನಾಡದೇವಿ ಕೃಪೆಯಿಂದ ಎಲ್ಲಾ ಜಲಾಶಯಗಳೂ ಭರ್ತಿ: ಡಿಕೆಶಿ
ಮೈಸೂರು

ನಾಡದೇವಿ ಕೃಪೆಯಿಂದ ಎಲ್ಲಾ ಜಲಾಶಯಗಳೂ ಭರ್ತಿ: ಡಿಕೆಶಿ

August 11, 2018

ಮೈಸೂರು: ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಕಬಿನಿಯಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡುತ್ತಿರುವುದರಿಂದ ನದಿ ಪಾತ್ರ ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಚಾಮುಂಡಿಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಷಾಡ ಮಾಸದ ಕೊನೆ ಶುಕ್ರವಾರವಾದ ಇಂದು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದಿದ್ದೇನೆ. ದೇವಿಯ ಕೃಪೆ ರಾಜ್ಯದ ಮೇಲಿದೆ.

ಚಾಮುಂಡೇಶ್ವರಿ ತಾಯಿ ಎಲ್ಲರಿಗೂ ಆಶೀರ್ವಾದ ಮಾಡಿದ್ದಾಳೆ. ಇದರಿಂದಾಗಿ ಉತ್ತಮ ಮಳೆಯಾಗುತ್ತಿದೆ. ಕೆಆರ್‌ಎಸ್‌, ಕಬಿನಿ ಸೇರಿದಂತೆ ಬಹುತೇಕ ಎಲ್ಲಾ ಅಣೆಕಟ್ಟುಗಳು ತುಂಬಿವೆ ಎಂದರು. ಸಾಲ ಮನ್ನಾ ವಿಚಾರದ ಗೊಂದಲ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆಯೇ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿಲು ನಿರಾಕರಿಸಿದ ಅವರು, ದೇವರ ದರ್ಶನ ಪಡೆದಿದ್ದೇನೆ. ಇಲ್ಲಿ ಯಾವುದೇ ರಾಜಕೀಯ ಮಾತನಾಡುವುದಿಲ್ಲ ಎಂದರು.

Translate »