ಮೈತ್ರಿ ಸರ್ಕಾರದ ವೈಫಲ್ಯ: ಜೂ. 30ಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರು

ಮೈತ್ರಿ ಸರ್ಕಾರದ ವೈಫಲ್ಯ: ಜೂ. 30ಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

June 16, 2018

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾ ರದ ವೈಫಲ್ಯ ಮುಂದಿಟ್ಟುಕೊಂಡು ಬಿಜೆಪಿ ಇದೇ 30 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ರೈತರ ಸಾಲ ಮನ್ನಾ, ರೈತರ ಆತ್ಮಹತ್ಯೆ ತಡೆಯುವಲ್ಲಿ ವಿಫಲತೆ ಸೇರಿದಂತೆ ಸರ್ಕಾರದ ಮಂದ ಧೋರಣೆಯನ್ನು ವಿರೋಧಿಸಿ ಹೋರಾ ಟಕ್ಕೆ ನಿರ್ಧರಿಸಿದೆ. ರೈತ ಮೋರ್ಚಾ ನೇತೃತ್ವದಲ್ಲಿ ಜೂ.30ರಿಂದ ಜುಲೈ 15ರವರೆಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ. ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಂಚರಿಸಲಿರುವ ಈ ತಂಡವು ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆ ಮೇರೆಗೆ ಪ್ರವಾಸ ಆರಂಭಿಸಲಿರುವ ಯುವ ಮೋರ್ಚಾದ ನಾಯಕರು ರೈತರ ಸಾಲ ಮನ್ನಾವನ್ನೇ ಪ್ರಧಾನವಾಗಿಟ್ಟುಕೊಂಡು ಹೋರಾಟ ನಡೆಸಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನ ಸಭೆ ಚುನಾವಣೆಗೂ ಮುನ್ನ ರೈತರ ಸಾಲ ಮನ್ನಾ ಮಾಡುವ ವಿಷಯ ದಲ್ಲಿ ಜನತೆಗೆ ನೀಡಿದ ಆಶ್ವಾಸನೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರಅವರು ನಡೆದುಕೊಳ್ಳುತ್ತಿ ರುವ ರೀತಿ ನೀತಿಗಳ ಬಗ್ಗೆಯೂ ಜನತೆ ರೈತ ಮೋರ್ಚಾ ಮನವರಿಕೆ ಮಾಡಲಿದೆ.

Translate »