‘ಸಮನ್ವಯದಿಂದ ಮೈತ್ರಿ ಧರ್ಮ ಪಾಲನೆ’
ಮೈಸೂರು

‘ಸಮನ್ವಯದಿಂದ ಮೈತ್ರಿ ಧರ್ಮ ಪಾಲನೆ’

March 25, 2019

ಮೈಸೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇ ಗೌಡ, ಸಿಎಂ.ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾ ಮಯ್ಯರ ಸೂಚನೆ ಯಂತೆ ರಾಜ್ಯದಲ್ಲಿ ಸಮನ್ವಯ ಸಾಧಿಸಿ ಮೈತ್ರಿ ಧರ್ಮ ಪಾಲನೆ ಮಾಡುತ್ತಿದ್ದೇವೆ ಎಂದು ಸಚಿವ ಸಾ.ರಾ.ಮಹೇಶ್ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಮೈತ್ರಿ ಅಭ್ಯರ್ಥಿಯಾಗಿ ಸಿ.ಹೆಚ್. ವಿಜಯ ಶಂಕರ್ ಅವರು ನಾಮಪತ್ರ ಸಲ್ಲಿಸಿದ ವೇಳೆ ಹಾಜರಿದ್ದ ಅವರು, ನಂತರ ಹೊರ ಬಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲೇ ಮೈಸೂರಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್‍ರನ್ನು ಬೆಂಬಲಿಸ ಲಾಗುತ್ತಿದೆ ಎಂದ ಅವರು, ಮಂಡ್ಯ, ಹಾಸನ, ತುಮಕೂರು ಸೇರಿದಂತೆ ಎಲ್ಲೆಡೆ ಎರಡೂ ಪಕ್ಷಗಳ ಮುಖಂಡರು, ಬಿಜೆಪಿಯನ್ನು ಅಧಿಕಾರ ದಿಂದ ದೂರವಿರಿಸಲು ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸುತ್ತೇವೆ. ಅದರಲ್ಲಿ ಯಾವುದೇ ಸಂದೇಹ ವಿಲ್ಲ ಎಂದರು. ಸಣ್ಣಪುಟ್ಟ ಭಿನ್ನಾಭಿಪ್ರಾಯ ವಿದ್ದ ಮಂಡ್ಯದಲ್ಲಿ ಈಗ ಪರಿಸ್ಥಿತಿ ಬದಲಾಗಿದೆ. ಕೊಡಗಿನಲ್ಲೂ ಯಾವುದೇ ಗೊಂದಲವಿಲ್ಲ. ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ಗೆಲ್ಲಿಸಿಕೊಳ್ಳಲು ಶ್ರಮಿಸುತ್ತೇವೆ ಎಂದು ಸಾ.ರಾ. ಮಹೇಶ್ ಇದೇ ಸಂದರ್ಭ ನುಡಿದರು.

Translate »