ಪರವಾನಗಿ ಇಲ್ಲದೆ ಬಂದೂಕು ಹೊಂದಲು ಕೊಡವರಿಗೆ ಅವಕಾಶ
ಕೊಡಗು

ಪರವಾನಗಿ ಇಲ್ಲದೆ ಬಂದೂಕು ಹೊಂದಲು ಕೊಡವರಿಗೆ ಅವಕಾಶ

March 30, 2022

ರಾಜ್ಯಕ್ಕೆ ಸುಪ್ರೀಂಕೋರ್ಟ್ ನೋಟಿಸ್
ನವದೆಹಲಿ, ಮಾ. ೨೯- ಪರವಾನಗಿ ಇಲ್ಲದೆ ಬಂದೂಕುಗಳನ್ನು ಹೊಂದಲು ಮತ್ತು ಸಾಗಿಸಲು ಕೊಡವ ಸಮುದಾಯದವರಿಗೆ ನೀಡಿದ ಅವಕಾಶ ವನ್ನು ಪ್ರಶ್ನೆ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ. ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಕೊಡವರಿಗೆ ನೀಡಿದ ಅನುಮತಿ ಸಾಂವಿಧಾನಿಕ ಸಿಂಧುತ್ವ ಹೊಂದಿದೆ. ಹೈಕೋರ್ಟ್ ನೀಡಿದ ಆದೇಶ ವನ್ನು ಪ್ರಶ್ನಿಸಿ ನಿವೃತ್ತ ಕ್ಯಾಪ್ಟನ್ ಚೇತನ ವೈ.ಕೆ. ಎನ್ನು ವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿ ದ್ದರು. ಈ ಅರ್ಜಿ ವಿಚಾರಣೆ ನಡೆಸಿ ಈ ಸಂಬAಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

ಜಾತಿ, ಜನಾಂಗದ ಪೂರ್ವಿಕರ ಭೂ ಒಡೆತನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ. ಇದು ಸಂವಿ ಧಾನದ ೧೪, ೧೫ ಮತ್ತು ೨೧ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಶಸ್ತಾçಸ್ತç ಕಾಯಿದೆಯ ಸೆಕ್ಷನ್ ೪೧ರ ಪ್ರಕಾರ, ಸಾರ್ವಜನಿಕ ಹಿತಾಸಕ್ತಿಯಿಂದ ಮಾತ್ರ ಶಸ್ತಾçಸ್ತç ಪರವಾನಗಿ ಪಡೆಯುವುದರಿಂದ ವಿನಾಯಿತಿ ನೀಡಬಹುದು. ಆದರೆ, ಕೊಡವ ಸಮುದಾಯಕ್ಕೆ ಅಂತಹ ವಿನಾಯಿತಿ ನೀಡುವ ಕುರಿತು ಅಧಿಸೂಚನೆಯಲ್ಲಿ ಯಾವುದೇ ಕಾರಣ ವನ್ನು ನೀಡಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಸಮರ ಸಮುದಾಯ ವಾಗಿರುವ ಕೊಡವ ಸಮುದಾಯವು ಸ್ವಾತಂತ್ರ÷್ಯಪೂರ್ವದಿಂದಲೂ ಜುಮ್ಮಾ ಹಿಡುವಳಿದಾರರು, ಅಂದಿನಿAದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಕೆಲವು ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ, ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯ ಲಾಗಿದೆ ಎಂದು ಈ ಹಿಂದೆ ಹೈಕೋರ್ಟ್ ಆದೇಶದಲ್ಲಿ ತಿಳಿಸಿತ್ತು. ಕೊಡಗಿನ ಜನರ ವಿಶಿಷ್ಟ ಸಂಸ್ಕöÈತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಇಂಡಿಯನ್ ಆರ್ಮ್್ಸ ಆಕ್ಟ್ ಸೆಕ್ಷನ್ ಮೂರರ ಪ್ರಕಾರ ಯಾರಿಗೂ ಇಲ್ಲದ ಅನುಮತಿ ಕೊಡವರಿಗೆ ಇದೆ. ಕೊಡಗಿನ ಜನರ ಹಬ್ಬ ಹರಿದಿನ. ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ ಕೊಡವರಲ್ಲಿ ಕೋವಿಗೆ ಪೂಜ್ಯಭಾವನೆಯಿದೆ, ಪವಿತ್ರ ಸ್ಥಾನವಿದೆ.

ONE COMMENT ON THIS POST To “ಪರವಾನಗಿ ಇಲ್ಲದೆ ಬಂದೂಕು ಹೊಂದಲು ಕೊಡವರಿಗೆ ಅವಕಾಶ”

  1. Prabhu Appaiah BC says:

    👌♥️spoken in English @govt primary school, thanks for honors B C Nagesh

Translate »