ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಸದ್ಯಕ್ಕೆ ಜೈಲೇ ಗತಿ
ಮೈಸೂರು

ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಸದ್ಯಕ್ಕೆ ಜೈಲೇ ಗತಿ

September 25, 2018

ಬೆಂಗಳೂರು: ಮಾರುತಿ ಗೌಡ ಅಪಹರಣ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಿ ಹಾಗೂ ಸಹಚರರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಬುಧವಾರಕ್ಕೆ ಕೋರ್ಟ್ ಕಾಯ್ದಿರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನಗರದ 8ನೇ ಎಸಿಎಂಎಂ ನ್ಯಾಯಾಲಯ, ಆದೇಶವನ್ನು ಸೆ.26ಕ್ಕೆ ಕಾಯ್ದಿರಿಸಿದ ಹಿನ್ನೆಲೆಯಲ್ಲಿ ದುನಿಯಾ ವಿಜಿ ಹಾಗೂ ಆಪ್ತರಿಗೆ ಸದ್ಯ ಜೈಲೇ ಗತಿ. ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಜಾಮೀನು ಕೋರಿ ವಿಜಯ್ ಹಾಗೂ ಆಪ್ತರು ಅರ್ಜಿ ಸಲ್ಲಿಸಿದ್ದರು.

ಜಾಮೀನು ವಿರೋಧಿಸಿ ಪಬ್ಲಿಕ್ ಪ್ರಾಸಿ ಕ್ಯೂಟರ್ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದರು. ಜಿಮ್ ತರ ಬೇತುದಾರ ಮಾರುತಿಗೌಡ ಎಂಬುವರನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣ ದಲ್ಲಿ ವಿಜಯ್ ಸೇರಿ ನಾಲ್ವರು ಆರೋಪಿ ಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಾಲಯ ಭಾನುವಾರ ಆದೇಶ ನೀಡಿತ್ತು. ಪ್ರಕರಣ ಸಂಬಂಧ ವಿಜಯ್, ಪ್ರಸಾದ್, ಮಣಿ, ಕಾರು ಚಾಲಕ ಪ್ರಸಾದ್ ಸೇರಿದಂತೆ ನಾಲ್ವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಶನಿವಾರ ತಡರಾತ್ರಿ ಅಂಬೇಡ್ಕರ್ ಭವನದಲ್ಲಿ ನಡೆದ ಬಾಡಿ ಬಿಲ್ಡಿಂಗ್ ಸ್ಪರ್ಧೆ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾರುತಿಗೌಡನ ಜತೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿತ್ತು. ಈ ವೇಳೆ ನಟ ವಿಜಯ್, ಅವರ ಸ್ನೇಹಿತರಾದ ಪ್ರಸಾದ್, ಮಣಿ ಎಂಬುವರು ಸೇರಿ ಮಾರುತಿಗೌಡನನ್ನು ಅಪಹರಿಸಿ, ಕಾರಿನಲ್ಲಿ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ದುನಿಯಾ ವಿಜಯ್ ಮತ್ತವರ ತಂಡವನ್ನು ಜೈಲಿನಲ್ಲಿ ಒಂದೇ ಸೆಲ್‍ನಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಇಂದು ವೈದ್ಯಕೀಯ ಪರೀಕ್ಷೆ ನಡೆಸಿ, ಬಳಿಕ ಫೋಟೋ ತೆಗೆಸಿ ವಿಚಾರಣಾಧೀನ ಕೈದಿ ನಂಬರ್ ನೀಡಲಾಗಿದೆ.

ಜೈಲಿನಲ್ಲಿರುವ ನಟ ವಿಜಿ ಸಿಬ್ಬಂದಿಗಳಿಗೆ ಸಿಗರೇಟ್ ಕೇಳಿದ್ದಾರೆ ಎನ್ನಲಾಗಿದ್ದು ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದಾರೆ. ರಾತ್ರಿಯೆಲ್ಲಾ ಎಚ್ಚರವಿದ್ದ ಅವರು ಬೆಳಿಗ್ಗೆ 4 ಗಂಟೆಗೆ ಮಲಗಿ 6.30ಕ್ಕೆ ಎದ್ದಿದ್ದಾರೆ. 7 ಗಂಟೆಗೆ ಜೈಲಿನ ಮೆನುವಿನಂತೆ ಪುಳಿಯೋಗರೆ ಹಾಗೂ ಟೀ ಸೇವಿಸಿದ್ದಾರೆ.

Translate »