ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ: ಬಿಜೆಪಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?
ಮೈಸೂರು

ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ: ಬಿಜೆಪಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?

February 8, 2019

ಬೆಂಗಳೂರು: ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜ ಕೀಯ ಬೆಳವಣಿಗೆಗಳು ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ವನ್ನು ಉರುಳಿಸಲು ರಾಜ್ಯ ನಾಯಕರಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿದ್ದರೂ ಬಿಜೆಪಿ ಹೈ ಕಮಾಂಡ್ ಇಲ್ಲಿಯವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಆದರೆ ಬುಧವಾರ ಮತ್ತು ಗುರುವಾರ ಅಧಿವೇಶನಕ್ಕೆ ವ್ಹಿಪ್ ಜಾರಿಯಾಗಿದ್ದರೂ ಮಿತ್ರ ಪಕ್ಷದ ಶಾಸಕರು ಗೈರಾದ ಹಿನ್ನೆಲೆ ಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಧಿಕೃತವಾಗಿ ಸರ್ಕಾರವನ್ನು ಬೀಳಿ ಸಲು ಒಪ್ಪಿಗೆ ನೀಡಿದ್ದಾರೆ ಎಂದು ಮೂಲ ಗಳು ತಿಳಿಸಿವೆ. ಎಷ್ಟು ಜನ ಶಾಸಕರು ರಾಜೀನಾಮೆಗೆ ಸಿದ್ಧರಿದ್ದಾರೋ ಅಷ್ಟೂ ಜನರಿಂದ ರಾಜೀನಾಮೆ ಕೊಡಿಸಿ ಎಂದು ಬಿಎಸ್‍ವೈಗೆ ಶಾ ನಿರ್ದೇಶನ ನೀಡಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.

ಅತೃಪ್ತ ಗೊಂಡಿರುವ ನಾಲ್ವರು ಶಾಸಕರ ಜೊತೆ ಇನ್ನೂ 5 ಮಂದಿ ಶಾಸಕರು ರಾಜೀನಾಮೆ ನೀಡಲು ಸಿದ್ಧರಿದ್ದಾರೆ ಎನ್ನಲಾಗಿದೆ. ಗುರು ವಾರ ಕಲಾಪದ ವೇಳೆ 175 ಶಾಸಕರು ಹಾಜರಿದ್ದರು. ಇದರಲ್ಲಿ ಜೆಡಿಎಸ್ 25, ಕಾಂಗ್ರೆಸ್ 60, ಬಿಜೆಪಿ 90 ಶಾಸಕರು. ಬುಧವಾರ ಗೈರಾಗಿದ್ದ ಸೌಮ್ಯಾರೆಡ್ಡಿ, ಕೃಷ್ಣಪ್ಪ ಹಾಜರಾಗಿದ್ದರೆ, ಪ್ರತಾಪ್‍ಗೌಡ ಪಾಟೀಲ್ ಗೈರಾಗಿದ್ದಾರೆ. ಬಿಜೆಪಿ ಬಾಲಚಂದ್ರ ಜಾರಕಿ ಹೊಳಿ, ಅರವಿಂದ ಲಿಂಬಾವಳಿ, ಅಶ್ವಥ್ ನಾರಾಯಣ್ ಗೈರು ಹಾಜರಾಗಿದ್ದರು. ಸದನ ಆರಂಭಗೊಳ್ಳುತ್ತಲೇ ಬಿಜೆಪಿ ಶಾಸಕರು ಸರ್ಕಾರಕ್ಕೆ ಶಾಸಕರ ಬೆಂಬಲ ಇಲ್ಲ. ಸಿಎಂ ರಾಜೀನಾಮೆ ನೀಡಬೇಕೆಂದು ಹೇಳಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

Translate »