ಇಂದು ಅಂಬರೀಶ್ ಅಂತ್ಯಕ್ರಿಯೆ
ಮೈಸೂರು

ಇಂದು ಅಂಬರೀಶ್ ಅಂತ್ಯಕ್ರಿಯೆ

November 26, 2018

ಬೆಂಗಳೂರು: ಶನಿವಾರ ರಾತ್ರಿ ನಿಧನರಾದ ಮಾಜಿ ಸಚಿವ ಹಾಗೂ ಕನ್ನಡ ಚಿತ್ರನಟ ಅಂಬರೀಶ್ ಅವರ ಅಂತ್ಯಕ್ರಿಯೆ ನಾಳೆ (ನ.26) ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ನಾಳೆ ಬೆಳಿಗ್ಗೆ 9 ಗಂಟೆಗೆ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಸೇನಾ ಹೆಲಿಕಾಪ್ಟರ್‍ನಲ್ಲಿ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ನಂತರ ಕಂಠೀರವ ಕ್ರೀಡಾಂಗಣಕ್ಕೆ ಕೊಂಡೊಯ್ದು, ಅಲ್ಲಿಂದ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿ ಅಲ್ಲಿ ಸಕಲ ಸರ್ಕಾರಿ ಗೌರವಗ ಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಅಂಬರೀಶ್ ಅಂತಿಮ ಯಾತ್ರೆಗೆ ಸುಮಾರು 20 ಸಾವಿರ ಪೊಲೀಸರನ್ನೊಳಗೊಂಡ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಬಂದೋಬಸ್ತ್ ಉಸ್ತುವಾರಿಯನ್ನು 4 ಹೆಚ್ಚುವರಿ ಪೊಲೀಸ್ ಆಯುಕ್ತರು ವಹಿಸಲಿದ್ದು, 15 ಡಿಸಿಪಿ, 5 ಆರ್‍ಐವಿ, 3 ಎಆರ್‍ಎಫ್ ತುಕಡಿಗಳು, 34 ಸಿಎಆರ್ ತುಕಡಿಗಳು, 30 ಕೆಎಸ್‍ಆರ್‍ಪಿ ತುಕಡಿ ಗಳು, 4 ಸಾವಿರ ಸಂಚಾರ ವಿಭಾಗದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು 11 ಸಾವಿರ ಕಾನೂನು-ಸುವ್ಯವಸ್ಥೆ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಂತಿಮ ಯಾತ್ರೆ ಸಾಗುವ ರಸ್ತೆಗಳನ್ನು ಸೆಕ್ಟರ್‍ಗಳಾಗಿ ವಿಂಗಡಿಸಲಾ ಗಿದ್ದು, ಪ್ರತೀ ಸೆಕ್ಟರ್‍ಗಳ ಉಸ್ತುವಾರಿ ಯನ್ನು ಡಿಸಿಪಿ ನೇತೃತ್ವದ ತಂಡಕ್ಕೆ ವಹಿ ಸಲಾಗಿದೆ. ಅಂತಿಮ ಯಾತ್ರೆ ಸಾಗುವ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಯಲ್ಲಿ ಕೆಲ ಬದಲಾವಣೆಗಳನ್ನು ಮಾಡ ಲಾಗಿದ್ದು, ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಗುರುತಿಸಲಾಗಿದೆ. ಆದ್ದ ರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.

Translate »