ಕಂದಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಪ್ರಕರಣ

ಜನಪ್ರತಿನಿಧಿಗಳು, ಪೊಲೀಸರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
ಯಳಂದೂರು:  ತಾಲೂಕಿನ ಕಂದಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರÀ ನಾಮಫಲಕಕ್ಕೆ ಸಗಣಿ ಬಳಿದು ಅಪಮಾನ ಮಾಡಿರುವ ಆರೋಪಿಗಳನ್ನು ಬಂಧಿಸು ವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ಸೋಮ ವಾರ ಕಂದಹಳ್ಳಿ ಗ್ರಾಮಸ್ಥರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ಗ್ರಾಮದ ಅಂಬೇಡ್ಕರ್ ಭಾವಚಿತ್ರ ಇರುವ ಸ್ಥಳದಲ್ಲಿ ಸಮಾವೇಶಗೊಂಡ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆ ಗಳ ಮುಖಂಡರು ಯಳಂದೂರಿನ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ಪೊಲೀಸ್ ಇಲಾಖೆ, ಸ್ಥಳೀಯ ಜನಪ್ರತಿ ನಿಧಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ಅಧ್ಯಕ್ಷತೆ ವಹಿಸಿದ ದಸಂಸ ಜಿಲ್ಲಾ ಸಂಚಾಲಕ ಕಂದಹಳ್ಳಿ ನಾರಾಯಣ್ ಮಾತನಾಡಿ, ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಬಳಿದು ಅಪಮಾನ ಮಾಡಿ 15 ದಿನವಾದರೂ ಈ ಸಂಬಂಧ ಪೊಲೀಸರು ಯಾವುದೇ ಆರೋಪಿಗಳನ್ನು ಪತ್ತೆ ಹಚ್ಚಿಲ್ಲ. ರಾಜಕೀಯ ಮುಖಂಡರು ಜಾತಿ ಲಾಬಿ ಒತ್ತಡಕ್ಕೆ ಮಣಿದ ಪೊಲೀಸರು ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎಂದು ದೂರಿದ್ದರು.

ರಾಜ್ಯದಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿರುವ ಎಸ್‍ಐಟಿ ತನಿಖೆ ಸಂಸ್ಥೆಗೆ ಪ್ರಕರಣವನ್ನು ಒಪ್ಪಿಸಬೇಕು. ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣ ಸಂಬಂಧ ಒಂದು ವಾರದಲ್ಲಿ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾ ದರೆ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಹಂತ-ಹಂತವಾಗಿ ಪ್ರತಿಭಟನೆ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಳಿಕ, ಡಿವೈಎಸ್‍ಪಿ ಪುಟ್ಟಮಾದಯ್ಯ ಮತ್ತು ತಾಲೂಕು ಕಚೇರಿ ಶಿರಸ್ತೆದಾರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆ ಯಲ್ಲಿ ಮುಖಂಡರಾದ ನಾಗರಾಜು, ಮಹೇಶ್, ದಿನೇಶ್, ಶ್ರೀನಿವಾಸ್, ಮಹದೇವ, ರೂಪ, ಮಹದೇವಮ್ಮ, ಸುಂದ್ರಮ, ಚಿಕ್ಕಮ್ಮದೇವಿ ಕರಿಯ, ಜಗದೀಶ್, ಪ್ರವೀಣ್ ಇತರರು ಇದ್ದರು.