ಕಬಡ್ಡಿಯಲ್ಲಿ ಅಮಚವಾಡಿ ಶಾಲೆ ಪ್ರಥಮ
ಚಾಮರಾಜನಗರ

ಕಬಡ್ಡಿಯಲ್ಲಿ ಅಮಚವಾಡಿ ಶಾಲೆ ಪ್ರಥಮ

August 22, 2018

ಚಾಮರಾಜನಗರ:  ತಾಲೂಕಿನ ಅಮಚವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಶಾಲೆಯ ವಿದ್ಯಾರ್ಥಿಗಳು ಕಳೆದ 21 ವರ್ಷಗಳಿಂದ ಸತತವಾಗಿ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುತ್ತಿರು ವುದು ವಿಶೇಷ. ಈ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ವಿದ್ಯಾರ್ಥಿಗಳು ಕೀರ್ತಿ ತಂದಿದ್ದಾರೆ. ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ಸ್ಪರ್ಧಾಳುಗಳನ್ನು ಶಾಲೆಯ ಮುಖ್ಯ ಶಿಕ್ಷಕರು ಆದ ದೈಹಿಕ ಶಿಕ್ಷಕ ಡಿ.ಲೋಕೇಶ್ ಕಾಲೇಜಿನ ಪ್ರಾಂಶುಪಾಲರಾದ ನಾಗಮಲ್ಲಪ್ಪ ಉಪನ್ಯಾಸಕ ಸುರೇಶ್ ಎನ್.ಋಗ್ವೇದಿ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

Translate »