ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಮರ್ಥನೆ
ಮೈಸೂರು, ಮೇ 21(ಆರ್‍ಕೆ)- ರೈತ ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ, ದ್ವಿಗುಣ ಬೆಲೆ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಮರ್ಥಿಸಿಕೊಂಡಿದ್ದಾರೆ.
ರೈತ ತನ್ನ ಬೆಳೆಯನ್ನು ನೇರವಾಗಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಈ ಕಾಯ್ದೆ ಅವಕಾಶ ಮಾಡಿಕೊಟ್ಟಿದೆ. ಈಗಾಗಲೇ 60 ಕಂಪನಿಗಳು ನೇರವಾಗಿ ರೈತರಿಂದ ಖರೀದಿಸಲು ಮುಂದೆ ಬಂದಿವೆ. ಸಹಜವಾಗಿ ಬೆಳೆಗೆ ದ್ವಿಗುಣ ಬೆಲೆ ಸಿಗುತ್ತದೆ. ಅದರಿಂದ ರೈತರಿಗೆ ಅನುಕೂಲವಾಗುವು ದಿಲ್ಲವೆ? ಎಂದು ಪ್ರಶ್ನಿಸಿದರು. ಪ್ರಧಾನ ಮಂತ್ರಿಗಳ ಕನಸು ಅದೇ ಆಗಿರುವುದರಿಂದ ಕೇಂದ್ರ ಸರ್ಕಾರದ ಆದೇಶವನ್ನು ಮುಖ್ಯಮಂತ್ರಿಗಳು ಅನುಷ್ಠಾನ ಮಾಡಿದ್ದಾರೆಯೇ ಹೊರತು, ಎಪಿಎಂಸಿ ಕಾಯ್ದೆ ತಿದ್ದುಪಡಿಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂ ದರು.
ವಿಪಕ್ಷಗಳ ನಾಯಕರೊಂದಿಗೆ ಚರ್ಚಿಸಿಯೇ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ವಿರೋಧ ಪಕ್ಷದ ನಾಯಕರೊಬ್ಬರೇ ಇದನ್ನು ಸ್ವಾಗತಿಸಿರುವಾಗ ಪ್ರತಿಭಟನೆ ಮಾಡುವು ದರಲ್ಲಿ ಅರ್ಥವಿದೆಯೇ ಎಂದ ಸಚಿವರು, ವಿರೋಧ ವ್ಯಕ್ತಪಡಿಸುವುದೇ ವಿರೋಧ ಪಕ್ಷಗಳ ಕೆಲಸ. ಪ್ರತಿಭಟನೆ ಮಾಡಿಕೊಳ್ಳಲಿ ಬಿಡಿ ಎಂದರು. ಲಾಕ್‍ಡೌನ್ ನಿರ್ಬಂಧದಿಂದಾಗಿ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ 5 ಸಾವಿರ ರೂ. ಪರಿಹಾರ ನೀಡುತ್ತಿದ್ದೇವೆ. ನರೇಗಾ ಯೋಜನೆ ಯಡಿ 150 ದಿನಗಳವರೆಗೆ ಕೆಲಸ ನೀಡಿ ಕೆರೆಕಟ್ಟೆ ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ. ತೋಟಗಾರಿಕೆಯಲ್ಲಿ ನಿರತರಾಗಿರುವವರಿಗೂ ಪರಿಹಾರ ತಲುಪಿಸುವ ಕೆಲಸವಾಗುತ್ತಿದೆ ಎಂದರು.