ಮಹಾರಾಷ್ಟ್ರದಲ್ಲಿ ಅಮಿತ್ ಶಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಮೈಸೂರು

ಮಹಾರಾಷ್ಟ್ರದಲ್ಲಿ ಅಮಿತ್ ಶಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

October 20, 2019

ಮುಂಬೈ: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಯಾಣಿಸು ತ್ತಿದ್ದ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೊನೆಯ ದಿನದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಅಮಿತ್ ಶಾ ಅವರ ಹೆಲಿಕಾಪ್ಟರ್ ಇಂದು ಮಧ್ಯಾಹ್ನ ನಾಸಿಕ್‍ನ ಓಜರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಮಿತ್ ಶಾ ಅವರ ಹೆಲಿಕಾಪ್ಟರ್ ನಾಸಿಕ್‍ನಿಂದ 70 ಕಿಲೋಮೀಟರ್ ದೂರದಲ್ಲಿರುವ ಅಹ್ಮದ್‍ನಗರ್ ಜಿಲ್ಲೆಯ ಅಕೋಲೆಗೆ ತೆರಳುತ್ತಿತ್ತು, ಅಲ್ಲಿ ಶಾ ಅವರು ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಬೇಕಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಾಹ್ನ 2:25ಕ್ಕೆ ಓಜರ್ ವಿಮಾನ ನಿಲ್ದಾಣದಲ್ಲಿ ಚಾಪರ್ ಇಳಿಸಲು ಪೈಲಟ್ ನಿರ್ಧರಿಸಿದರು. ನಂತರ ಸುಮಾರು 40 ನಿಮಿಷಗಳ ಬಳಿಕ ಶಾ ಹೆಲಿಕಾಪ್ಟರ್ ಅಹ್ಮನ್ ನಗರಕ್ಕೆ ಪ್ರಯಾಣ ಬೆಳೆಸಿತು ಎಂದು ಅವರು ತಿಳಿಸಿದರು.

Translate »