ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್
ಕೊಡಗು

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್

May 7, 2018

ಮಡಿಕೇರಿ: ಚುನಾವಣೆಗೆ ದಿನಗಣನೆ ಹತ್ತಿರವಾಗುತ್ತಿರುವಂತೆಯೇ ಜಿಲ್ಲೆಯಲ್ಲಿ ಪ್ರಚಾರ ಕಾವು ಬಿರುಸು ಪಡೆದುಕೊಂಡಿದೆ.

ಈಗಾಗಲೇ ಕಾಂಗ್ರೆಸ್‍ನ ಯುವರಾಜ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದ ರಾಮಯ್ಯ ಸೇರಿದಂತೆ ರಾಜ್ಯಮಟ್ಟದ ನಾಯ ಕರು ಜಿಲ್ಲೆಯಲ್ಲಿ ಒಂದು ಹಂತದ ಚುನಾ ವಣಾ ಪ್ರಚಾರ ನಡೆಸಿದ್ದು, ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮಧು ಬಂಗಾರಪ್ಪ, ಪಕ್ಷದ ಸ್ಟಾರ್ ಪ್ರಚಾ ರಕಿ ಪೂಜಾಗಾಂಧಿ ಜೆಡಿಎಸ್ ಅಭ್ಯರ್ಥಿ ಗಳ ಪರ ಪ್ರಚಾರ ನಡೆಸಿದ್ದಾರೆ.
ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆ ಸಲಿರುವುದು ಬಿಜೆಪಿ ಅಭ್ಯರ್ಥಿಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹಕ್ಕೆ ಕಾರಣವಾಗಿದೆ. ಕೇಂದ್ರ ಸಚಿವೆ ಸ್ಮøತಿ ಇರಾನಿ, ಸ್ಟಾರ್ ಪ್ರಚಾರಕರಾದ ಶ್ರುತಿ, ಯಶ್, ಸಂಸದ ಪ್ರತಾಪ್ ಸಿಂಹ, ಎಂಎಲ್‍ಸಿ ಸುನೀಲ್ ಸುಬ್ರಮಣ , ವೀರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ. ಬೋಪಯ್ಯ ಸೇರಿದಂತೆ ರಾಜ್ಯ ನಾಯಕರು ಸೋಮವಾರದಂದು ಸೋಮವಾರಪೇಟೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಬಸವೇಶ್ವರ ವೃತ್ತ ದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಮಂಗಳವಾರದಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಡಿಕೇರಿಯಲ್ಲಿ ರೋಡ್ ಶೋ ಮೂಲಕ ಅಭ್ಯರ್ಥಿಗಳಾದ ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ ಪರ ಮತಯಾಚನೆ ನಡೆಸಲಿದ್ದಾರೆ. ಅದೇ ದಿನ ಬೆಳಗ್ಗೆ 11 ಗಂಟೆಗೆ ಗೋಣ ಕೊಪ್ಪಲು ವಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳ ಲಿದ್ದಾರೆ. ಚುನಾವಣಾ ಚಾಣಾಕ್ಷ ಎಂದೇ ಕರೆಯಲ್ಪಡುವ ಅಮಿತ್ ಶಾ, ಕೇಂದ್ರ ಸಚಿವೆ ಸ್ಮøತಿ ಇರಾನಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಮೊದಲ ಬಾರಿಗೆ ಕೊಡಗಿಗೆ ಆಗಮಿಸುತ್ತಿರುವುದು ಕಾರ್ಯಕರ್ತರಲ್ಲಿ ಹುರುಪು ಮೂಡಿಸಿದೆ.

ಬಿಜೆಪಿ ಅಭ್ಯರ್ಥಿಗಳಾದ ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ ಅವರಿಗೆ ಈ ಬಾರಿಯ ಚುನಾವಣೆ ಕಬ್ಬಿಣದ ಕಡಲೆಯಂತಾಗಿದ್ದು, ಘಟಾನು ಘಟಿಗಳನ್ನೇ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿ ದ್ದಾರೆ. ಪಕ್ಷದೊಳಗಿನ ಅಸಮಾಧಾನ, ಕಾರ್ಯಕರ್ತರ ಅಸಹಕಾರಗಳೇ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಪ್ರಚಾರ ಕಾರ್ಯಕ್ಕೆ ಕೇಂದ್ರ ನಾಯಕರ ಮೊರೆಹೋಗಲು ಕಾರಣ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರು ತ್ತಿದ್ದು, ಬಿಜೆಪಿಯ ಕೋಟೆಗೆ ಲಗ್ಗೆ ಹಾಕಿ ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸಿದರೇ, ಬಿಜೆಪಿ ಜಿಲ್ಲೆ ಯಲ್ಲಿ ತನ್ನ ಸಾಮ್ರಾಜ್ಯ ಶಾಹಿತ್ವವನ್ನು ಮುಂದು ವರೆಸಲು ಪ್ರತಿತಂತ್ರ ಹೂಡುತ್ತಿದೆ. ಈ ಎಲ್ಲಾ ತಂತ್ರ ಮತ್ತು ಪ್ರತಿತಂತ್ರಗಳನ್ನು ಮೌನದಿಂದಲೇ ವೀಕ್ಷಿಸುತ್ತಿರುವ ಮತ ದಾರ ಪ್ರಭು ಮಾತ್ರ ಯಾರ ಪರ ವಹಿ ಸಲಿದ್ದಾನೆ ಅನ್ನೋದು ಮಾತ್ರ ಕುತೂಹಲ ಉಳಿಸಿಕೊಂಡಿದೆ.

Translate »