ಏಪ್ರಿಲ್ 1ಕ್ಕೆ ರಾಜ್ಯಕ್ಕೆ ಅಮಿತ್ ಶಾ ಭೇಟಿ

ಬೆಂಗಳೂರು,ಮಾ.22-ಕೇಂದ್ರ ಗೃಹ ಸಚಿವ ಅಮಿತ್ ಷಾ ಏ.1ರಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಖಚಿತ ಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ಮುಖಂಡರಲ್ಲಿ ತಳಮಳ ಸೃಷ್ಟಿಯಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆ ಗಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿ ಸುವುದು ಹಾಗೂ ರಾಜ್ಯ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ಹಿರಿಯ ಮುಖಂಡರ ಜೊತೆ ಮಾತುಕತೆ ನಡೆ ಯುವ ಸಾಧ್ಯತೆ ಇದೆ. ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಚುನಾವಣೆ ಮುಗಿದ ಬಳಿಕ ಚರ್ಚೆ ಮಾಡೋಣ ಎಂಬ ಮಾತನ್ನು ಷಾ ತಿಳಿಸಿದ್ದರು. ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಬಜೆಟ್ ಅಧಿವೇಶನ ಆರಂಭವಾಗಿತ್ತು. ಅದು ಮುಗಿಯುವವರೆಗೆ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ಬೇಡ ಎಂಬ ನಿಲುವಿಗೆ ಪಕ್ಷದ ನಾಯಕರು ಬಂದಿದ್ದರು. ಇದೀಗ ಅಮಿತ್ ಶಾ ಏ.1ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನವೂ ಮುಗಿದಿರುತ್ತದೆ. ಹೀಗಾಗಿ, ಅವರು ರಾಜ್ಯಕ್ಕೆ ಆಗಮಿಸಿದಾಗ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆಯೂ ನಡೆಯಬಹುದಾಗಿದೆ.