ಅಮಿತ್ ಷಾ ರಾಜ್ಯ ಭೇಟಿ ಹಿಂದೆಯೇ ಸಿಎಂ ಬೊಮ್ಮಾಯಿಗೆ ದೆಹಲಿ ಬುಲಾವ್
News

ಅಮಿತ್ ಷಾ ರಾಜ್ಯ ಭೇಟಿ ಹಿಂದೆಯೇ ಸಿಎಂ ಬೊಮ್ಮಾಯಿಗೆ ದೆಹಲಿ ಬುಲಾವ್

April 5, 2022

ಬೆಂಗಳೂರು,ಏ.4(ಕೆಎಂಶಿ)-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದೆಹಲಿಗೆ ಬರುವಂತೆ ಬಿಜೆಪಿ ವರಿ ಷ್ಠರು ಬುಲಾವ್ ಮಾಡಿದ್ದಾರೆ. ವರಿಷ್ಠರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ನಾಳೆ (ಏ.5)ಮಧ್ಯಾಹ್ನ ದೆಹಲಿಗೆ ತೆರಳು ತ್ತಿದ್ದು, ಎರಡು ದಿನಗಳ ಕಾಲ ಅಲ್ಲಿಯೇ ಬಿಡಾರ ಹೂಡಲಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡಿ ಮರಳುತ್ತಿದ್ದಂತೆ ಮುಖ್ಯಮಂತ್ರಿ ಅವರನ್ನು ಕರೆಸಿಕೊಳ್ಳು ತ್ತಿರುವುದು ಹಲವಾರು ಊಹಾಪೋಹಗಳಿಗೆ ಎಡೆಮಾಡಿ ಕೊಟ್ಟಿದೆ. ಮುಖ್ಯಮಂತ್ರಿ ಅವರು ದೆಹಲಿಗೆ ತೆರಳುವುದಕ್ಕೂ ಮುನ್ನವೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವ ರನ್ನು ವರಿಷ್ಠರು ಕರೆಸಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿದ್ದ ಶೆಟ್ಟರ್ ಅವರನ್ನು ತಡರಾತ್ರಿ ವರಿಷ್ಠರು ಸಂಪರ್ಕಿಸಿ ದೆಹಲಿಗೆ ಬರುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಅವರು ಬೆಳಗಾವಿ ಮೂಲಕ ದೆಹಲಿಗೆ ತೆರಳಿದ್ದಾರೆ.

ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ನಂತರ ಕರ್ನಾಟಕ ಮತ್ತು ಗುಜರಾತ್ ರಾಜ್ಯಗಳ ಕಡೆ ಗಮನ ಹರಿಸಿರುವ ವರಿಷ್ಠರು, ಈ ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಪಣ ತೊಟ್ಟಿದ್ದಾರೆ. ಕರ್ನಾಟಕದಲ್ಲಿ ಪೂರ್ಣ ಬಹುಮತ ಗಳಿಸಿ ಎಂದೂ ಅಧಿಕಾರದ ಚುಕ್ಕಾಣಿ ಹಿಡಿ ಯಲು ಇನ್ನೂ ಸಾಧ್ಯವಾಗಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿ ಕಾರಕ್ಕೆ ತರಬೇಕು ಎಂದು ಈಗಿನಿಂದಲೇ ಸಜ್ಜುಗೊಳಿಸಲು ಮುಂದಾಗಿದ್ದಾರೆ. ಆದರೆ, ಪಕ್ಷ ಮತ್ತು ಸರ್ಕಾರದಲ್ಲಿ ಕೆಲವು ಗೊಂದಲಗಳು ಸೃಷ್ಟಿಯಾಗಿ ಪಕ್ಷಕ್ಕೆ ಹಿನ್ನಡೆ ಯಾಗು ತ್ತಿದೆ. ಇದನ್ನು ತಪ್ಪಿಸಿ ಸಂಘಟನಾತ್ಮಕವಾಗಿ ಚುನಾವಣೆ ಎದುರಿಸಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ಇದರ ಅಂಗವಾಗಿಯೇ ಮುಖ್ಯಮಂತ್ರಿ ಅವರನ್ನು ದೆಹಲಿಗೆ ಕರೆಸಿಕೊಳ್ಳಲಾಗುತ್ತಿದೆ ಎಂದು ಪಕ್ಷದ ಮೂಲ ಗಳು ತಿಳಿಸಿವೆ. ಈ ಭೇಟಿಯ ಸಂದರ್ಭದಲ್ಲಿ ಸರ್ಕಾರದಲ್ಲಿ ಮಹತ್ತರ ಬದಲಾವಣೆ ಬಗ್ಗೆ ವರಿಷ್ಠರು ಚರ್ಚಿಸುವ ಸಾಧ್ಯತೆ ಇದೆ. ಒಂದು ವೇಳೆ ಅಂಥ ನಿರ್ಧಾರ ಕೈಗೊಂ ಡರೆ, ಏ.10ರ ವೇಳೆಗೆ ಎಲ್ಲವೂ ಪೂರ್ಣಗೊಳ್ಳುತ್ತದೆ. ಒಂದು ವೇಳೆ ನಾಯಕತ್ವ ಬದಲಾವಣೆ ಇಲ್ಲವೆಂದರೆ, ಕೇಂದ್ರ ಬಿಜೆಪಿ ನಾಯಕರ ಮಾರ್ಗದರ್ಶನದಲ್ಲೇ ಉಳಿದ ಅವಧಿಯ ಆಡಳಿತ ನಡೆಯುತ್ತದೆ. ಬೊಮ್ಮಾಯಿ ಅವರ 2 ದಿನಗಳ ದೆಹಲಿ ಭೇಟಿ ಸಂದರ್ಭದಲ್ಲೇ ಎಲ್ಲವೂ ಇತ್ಯರ್ಥ ವಾಗಲಿದೆ. ಆದರೆ, ಮುಖ್ಯಮಂತ್ರಿ ಕಾರ್ಯಾಲಯ ಮಾತ್ರ ಕೇಂದ್ರ ಜಲಶಕ್ತಿ ಸಚಿವರ ಭೇಟಿಗಾಗಿ ದೆಹಲಿ ಪ್ರವಾಸ ಎನ್ನು ತ್ತಿದೆ. ಆದರೆ, ಪಕ್ಷದ ಮೂಲಗಳ ಪ್ರಕಾರ ಪ್ರಮುಖ ರಾಜ ಕೀಯ ನಿರ್ಧಾರ ಕೈಗೊಳ್ಳಲು ಬೊಮ್ಮಾಯಿ ಅವರನ್ನು ದೆಹಲಿಗೆ ಕರೆಸಿಕೊಳ್ಳುತ್ತಿ ದ್ದಾರೆ. ಇದಕ್ಕೆ ಪುಷ್ಟಿ ನೀಡು ವಂತೆ ಶೆಟ್ಟರ್ ಕರೆಸಿ ಕೊಂಡು ಮಾತು ಕತೆ ನಡೆಸಿರುವುದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ದೆಹಲಿ ಯಲ್ಲೇ ಉಳಿಯುವಂತೆ ನಿರ್ದೇಶನ ನೀಡಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

Translate »