ಮುಂಬೈ: ಕ್ವಾರಂಟೈನ್ ಕೇಂದ್ರದಲ್ಲೂ ಕಾಮುಕರು ಕ್ರೌರ್ಯ ಮುಂದುವರೆಸಿದ್ದು, ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ನವೀ ಮುಂಬೈನ ಪನ್ವೆಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘೋರ ಘಟನೆ ನಡೆದಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಕೊರೋನಾ ಸೋಂಕಿತೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಸಂತ್ರಸ್ಥೆ ಪೆÇಲೀಸ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪನ್ವೆಲ್ ಪೆÇಲೀಸ್ ಠಾಣಾ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.
ಈ ಬಗ್ಗೆ ಪೆÇಲೀಸ್ ಅಧಿಕಾರಿ ಅಶೋಕ್ ರಜಪೂತ್, 40 ವರ್ಷದ ಮಹಿಳೆಗೆ ಕೊರೊನಾ ದೃಢವಾಗಿದ್ದ ಹಿನ್ನೆಲೆಯಲ್ಲಿ ಪನ್ವೆಲ್‍ನಲ್ಲಿರುವ ಇಂಡಿಯಾ ಬುಲ್ಸ್ ಕ್ವಾರಂಟೈನ್ ಕೇಂದ್ರ ದಲ್ಲಿ ಇರಿಸಲಾಗಿತ್ತು. ಈ ವೇಳೆ ಅದೇ ಕೇಂದ್ರದಲ್ಲಿ ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದಾತನನ್ನೂ ಇರಿಸಲಾಗಿತ್ತು. ಇಂದು ಮುಂಜಾನೆ ಆತ ಮಹಿಳೆ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಪ್ರಸ್ತುತ ಆರೋಪಿಯನ್ನು ಬಂಧಿಸಿಲ್ಲ. ಕಾರಣ ಆತನ ಕೊರೊನಾ ಟೆಸ್ಟ್ ವರದಿ ಬಂದಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆತನನ್ನು ಪ್ರತ್ಯೇಕವಾಗಿರಿಸಿ ವರದಿಗಾಗಿ ಕಾಯುತ್ತಿದ್ದೇವೆ. ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.