ಬೆಂಗಳೂರು: ಮೈಸೂರು ನಗರಕ್ಕೆ ಅಮೃತ್ ಯೋಜನೆಯಡಿ 24×7 ಕುಡಿ ಯುವ ನೀರು ಸರಬರಾಜು ಯೋಜನಾ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಹೆಚ್ಚುವರಿ ಯಾಗಿ 85 ಕೋಟಿ ರೂ. ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಇಂದಿಲ್ಲಿ ಸಮ್ಮತಿಸಿದೆ.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇ ಗೌಡ, ಜೆಎನ್ ನರ್ಮ್ ಯುಐಜಿ -ಸ್ಥಿತ್ಯಂತರ ಹಂತದಡಿಯಲ್ಲಿ ಪೂರ್ಣಗೊಂಡಿರುವ ಈ ಯೋಜನೆಗಳಿಗೆ ಮತ್ತಷ್ಟು ಹಣ ಅಗತ್ಯವಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿದೆ.
ಬೆಂಗಳೂರು ಜಯದೇವ ಹೃದ್ರೋಗ ಸಂಸ್ಥೆಯ ಮೇಲಿರುವ ಒತ್ತಡ ಕಡಿಮೆ ಮಾಡುವ ಉದ್ದೇಶ ದಿಂದ ಮೈಸೂರಿನಲ್ಲಿ ಆರಂಭವಾಗಿರುವ ಜಯ ದೇವ ಹೃದ್ರೋಗ ಸಂಸ್ಥೆಗೆ ಮತ್ತಷ್ಟು ಮೂಲ ಸೌಕರ್ಯ ಕಲ್ಪಿಸಲು 168 ಕೋಟಿ ರೂ.ಗಳನ್ನು ನೀಡಲು ಸರ್ಕಾರ ಸಮ್ಮತಿಸಿದೆ. ಮೈಸೂರಿನಲ್ಲಿ ಆಸ್ಪತ್ರೆಯ ಶಾಖೆ ಉನ್ನತ ಮಟ್ಟದಲ್ಲಿ ಆರಂಭ ಗೊಳ್ಳುವುದರಿಂದ ಆ ಭಾಗದ ಹೃದಯ ರೋಗಿ ಗಳಿಗೆ ಅನುಕೂಲವಾಗಲಿದೆ ಮತ್ತು ತ್ವರಿತಗತಿ ಯಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ ಎಂಬ ದೃಷ್ಟಿಯಿಂದ ಇಂತಹ ತೀರ್ಮಾನ ಕೈಗೊಳ್ಳ ಲಾಗಿದೆ ಎಂದರು. ವಿಶ್ವೇಶ್ವರಯ್ಯ ನಾಲಾ ಜಾಲದ ಮೊದಲನೇ ಹಂತದ ಆಧುನಿಕ ಕಾಮಗಾರಿ ಗಳನ್ನು 300 ಕೋಟಿ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳುವುದು, ಅಲ್ಲದೆ ಎರಡನೇ ಹಂತದ ಆಧುನೀಕರಣ ಕಾಮಗಾರಿಗಳನ್ನು 222.37 ಕೋಟಿ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಹಾಸನದಲ್ಲಿ ಸಣ್ಣ ಪ್ರಮಾ ಣದ ವಿಮಾನ ನಿಲ್ದಾಣ ಪ್ರಾರಂಭಿಸಲು ಇದೇ ಸಂದರ್ಭದಲ್ಲಿ ಸಂಪುಟ ಒಪ್ಪಿಗೆ ನೀಡಿದೆ. ಅಷ್ಟೇ ಅಲ್ಲದೆ ನಿಲ್ದಾಣಕ್ಕೆ ಸಂಬಂಧಿಸಿದಂತೆ ವಿಸ್ತøತ ವರದಿ ಸಿದ್ಧಪಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದೆ.
ಹೊಳೆನರಸೀಪುರ ತಾಲೂ ಕಿಗೆ 62 ಕೋಟಿ ರೂ. ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಗೆ ಅನುಮತಿ ನೀಡಿರು ವುದಲ್ಲದೆ, 100 ಕೋಟಿ ರೂ. ವೆಚ್ಚದಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿಗೂ ಕುಡಿಯುವ ನೀರು ಕಲ್ಪಿಸುವ ಯೋಜನೆಗೆ ಅನುಮತಿ ನೀಡಿದೆ.
ರಾಮನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ 63 ಕೋಟಿ ರೂ.ಗಳನ್ನು ನೀಡಲು ಸಂಪುಟ ಸಮ್ಮತಿಸಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಜಿಂದಾಲ್‍ಗೆ 3666 ಎಕರೆ ಭೂಮಿ: ಲೋಕ ಸಭಾ ಚುನಾವಣಾ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಜಿಂದಾಲ್ ಸಂಸ್ಥೆಗೆ 3666 ಎಕರೆ ಭೂಮಿಯನ್ನು ಪರಭಾರೆ ಮಾಡುವ ಮಹತ್ವದ ತೀರ್ಮಾನದ ಜೊತೆಗೆ ನಗರಸಭಾ ಚುನಾವಣೆಯಲ್ಲಿ ನೋಟಾ ಸೇರ್ಪಡಿಸಲು ರಾಜ್ಯ ಸಚಿವ ಸಂಪುಟ ಇಂದಿಲ್ಲಿ ಅನುಮತಿ ನೀಡಿದೆ. ಸಭೆಯ ನಂತರ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಕೃಷ್ಣಭೈರೇಗೌಡ, ಬಳ್ಳಾರಿಯಲ್ಲಿ ಜೆಎಸ್‍ಡಬ್ಲ್ಯೂ ಸ್ಟೀಲ್‍ಗೆ ಗಣಿಗಾಗಿ
ಭೂಮಿಗೆ ಗುತ್ತಿಗೆ ಜೊತೆಗೆ ಸಂಸ್ಥೆ ಆರಂಭಿಸಲು ಇದೇ ಆಧಾರದ ಮೇಲೆ ಭೂಮಿ ನೀಡಲಾಗಿತ್ತು. ಇದೀಗ ಪೂರ್ಣ ಪ್ರಮಾಣದಲ್ಲಿ ಸಂಸ್ಥೆಗೆ ಭೂಮಿಯನ್ನು ಪರಭಾರೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 453 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಇದೇ ಸಂದರ್ಭದಲ್ಲಿ ಅನುಮತಿ ನೀಡಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಯೋಜನೆ ಮತ್ತು ಪರಿಸರ ಮಾಲಿನ್ಯಕ್ಕೆ ಹೆಚ್ಚು ಒತ್ತು ಕೊಡಲು ಸಹಕಾರಿಯಾಗಲಿದೆ ಎಂದರು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಿನದಿಂದ ದಿನಕ್ಕೆ ರೋಗಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲೇ ಹೊಸದಾಗಿ ಒಂದು ಸಾವಿರ ಹಾಸಿಗೆಗಳ ವಾರ್ಡ್ ನಿರ್ಮಾಣಕ್ಕೆ ಸಮ್ಮತಿಸಲಾಗಿದೆ. ಪೂರ್ವ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ ತಿಂಗಳ ಅಂತ್ಯದಿಂದಲೇ ಮೋಡ ಬಿತ್ತನೆ ನಡೆಸಲು ಸಭೆ ಅನುಮತಿ ನೀಡಿದೆ. ಅಲ್ಲದೆ ಇದಕ್ಕಾಗಿ 83 ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು. ಗದಗ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು 22 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ತೀರ್ಮಾನಿಸಿದೆ. ರಾಜ್ಯದಲ್ಲಿ ಹೊಸದಾಗಿ 15 ಮುರಾರ್ಜಿ ದೇಸಾಯಿ ಶಾಲೆ ಆರಂಭಿಸಲು 377 ಕೋಟಿ ರೂ. ನೀಡಲು ಸರ್ಕಾರ ಸಮ್ಮತಿಸಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ರಾಯಚೂರಿನಲ್ಲಿ ಪ್ರತ್ಯೇಕ ವಿವಿ ಸ್ಥಾಪನೆಗೆ ಸಂಪುಟ ಒಪ್ಪಿಗೆ ನೀಡಿರುವುದಲ್ಲದೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ 119 ಕೋಟಿ ರೂ. ಬಿಡುಗಡೆ ಮಾಡಿದೆ.