ವರುಣಾಘಾತದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ಪರಿಹಾರ ಕಾಮಗಾರಿಗೆ ಹೆಚ್ಚುವರಿಯಾಗಿ 55 ಕೋಟಿ ಬಿಡುಗಡೆ
ಮೈಸೂರು

ವರುಣಾಘಾತದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ಪರಿಹಾರ ಕಾಮಗಾರಿಗೆ ಹೆಚ್ಚುವರಿಯಾಗಿ 55 ಕೋಟಿ ಬಿಡುಗಡೆ

August 9, 2020

ಬೆಂಗಳೂರು, ಆ.8(ಕೆಎಂಶಿ)-ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಜಿಲ್ಲೆಗಳಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಹೆಚ್ಚುವರಿಯಾಗಿ 55 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಕೋವಿಡ್-19 ಸೋಂಕಿಗೆ ಸಿಲುಕಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಯಡಿ ಯೂರಪ್ಪ ಶನಿವಾರ ಹಿರಿಯ ಅಧಿಕಾರಿಗಳನ್ನು ದೂರ ವಾಣಿ ಮೂಲಕ ಸಂಪರ್ಕಿಸಿ, ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಈ ಹಣ ಬಿಡುಗಡೆ ಮಾಡುವಂತೆ ಸೂಚಿಸಿದರು. ಈಗಾಗಲೇ 50 ಕೋಟಿ ರೂ. ಬಿಡುಗಡೆ ಮಾಡಿದ್ದು, ಇದರೊಂದಿಗೆ ಹೆಚ್ಚು ವರಿಯಾಗಿ 55 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ ಮುಖ್ಯಮಂತ್ರಿಯವರು ಕೊಡಗು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಾಪುರ, ಬಾಗಲಕೋಟೆ ಸೇರಿದಂತೆ ಅತೀ ಹೆಚ್ಚು ಮಳೆ ಮತ್ತು ಪ್ರವಾಹ ಉಂಟಾಗಿರುವ ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ, ಮಾಹಿತಿ ಪಡೆದರು. ಕೊಡಗು ಮತ್ತು ಉಡುಪಿ, ಉತ್ತರ ಕನ್ನಡದಲ್ಲಿ ಗುಡ್ಡಗಳು ಕುಸಿದು, ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ ಎಂಬ ಮಾಹಿತಿ ಪಡೆದ ನಂತರ ಮುಖ್ಯಕಾರ್ಯದರ್ಶಿಗಳನ್ನು ಸಂಪರ್ಕಿಸಿದ ಮುಖ್ಯ ಮಂತ್ರಿಗಳು, ನೆರೆ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿ ಗಳ ಜೊತೆ ಸಮಾಲೋಚನೆ ನಡೆಸಿ, ನನ್ನ ಅನುಮತಿ ಇಲ್ಲದೆ, ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಒಪ್ಪಿಗೆ ನೀಡಿ ಎಂದು ಸಲಹೆ ಮಾಡಿದರು. ರಾಜ್ಯದಲ್ಲಿ ಕೆಲವು ದಿನಗಳಿಂದ ಬೀಳುತ್ತಿರುವ ಮುಂಗಾರು ಮಳೆ ಮತ್ತು ಮಹಾರಾಷ್ಟ್ರ, ಕೇರಳದಲ್ಲಿ ಭಾರೀ ಮಳೆಯಿಂದ ರಾಜ್ಯದ ಕೆಲವು ಭಾಗದಲ್ಲಿ ನದಿಗಳು ಉಕ್ಕಿ ಹರಿಯುತ್ತಿದೆ. ಮಳೆ ಕಡಿಮೆಯಾದರೂ, ಪ್ರವಾಹ ಪರಿಸ್ಥಿತಿ ಹಾಗೆಯೇ ಮುಂದುವರೆದಿದೆ. ಜನಜೀವನ ಸಂಪೂರ್ಣ ಅಸ್ಥವ್ಯಸ್ತ ಗೊಂಡಿದೆ. ಈ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕಾಮ ಗಾರಿ ಮತ್ತು ಸೂರು ಕಳೆದುಕೊಂಡವರಿಗೆ ತಾತ್ಕಾಲಿಕ ಪರಿಹಾರ ನೀಡಲು ಸರ್ಕಾರ ಆದೇಶ ಹೊರಡಿಸಿದೆ.

Translate »