ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ
ಹಾಸನ

ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ

February 14, 2019

ಅರಸೀಕೆರೆ: ಕನಿಷ್ಠ ವೇತನ ಜಾರಿಗೊಳಿ ಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾ ಯಿಸಿ ಪಟ್ಟಣದಲ್ಲಿ ಬುಧವಾರ ಎಐಟಿಯುಸಿ ಬ್ಯಾನರ್ ಅಡಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಜಮಾಯಿಸಿದ್ದ ತಾಲೂಕಿನ 300ಕ್ಕೂ ಹೆಚ್ಚಿನ ಅಂಗನವಾಡಿ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿ ಸಿಡಿಪಿಒ ಹಾಗೂ ತಹಶೀ ಲ್ದಾರರಿಗೆ ಮನವಿ ಸಲ್ಲಿಸಿದರು.

ಫೆಡರೇಷನ್ ಅಧ್ಯಕ್ಷೆ ನೇತ್ರಾವತಿ ಮಾತನಾಡಿ, ನಮಗೆ ಉದ್ಯೋಗ ಭದ್ರತೆಯಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆ ರಡೂ ನಮ್ಮನ್ನು ಜೀತ ಪದ್ಧತಿಯ ಆಳುಗಳಂತೆ ನೋಡುತ್ತಿವೆ. ಕೂಡಲೇ, ಈ ಧೋರಣೆ ಬಿಟ್ಟು ನಮ್ಮನ್ನು ನೌಕರರಂತೆ ಪರಿಗಣಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಜಯಮ್ಮ, ಕಾರ್ಯದರ್ಶಿ ರತ್ನಮ್ಮ, ಖಜಾಂಚಿ ಶಾಂತಮ್ಮ, ಗೌರಮ್ಮ, ಲತಾಮಣಿ, ಉಪಾಧ್ಯಕ್ಷರಾದ ಪ್ರೇಮ, ಗಾಯತ್ರಿ, ದ್ರಾಕ್ಷಾಯಿಣಮ್ಮ ಮತ್ತಿತರರು ಪಾಲ್ಗೊಂಡಿದ್ದರು.

Translate »