ಜು.22ರಂದು ಎವಿಎಸ್‍ಎಸ್  ಸಹಕಾರ ಸಂಘದ ವಾರ್ಷಿಕೋತ್ಸವ
ಮೈಸೂರು

ಜು.22ರಂದು ಎವಿಎಸ್‍ಎಸ್  ಸಹಕಾರ ಸಂಘದ ವಾರ್ಷಿಕೋತ್ಸವ

July 20, 2018

ಮೈಸೂರು: ಅಂಬೇಡ್ಕರ್ ವಿವಿಧೋದ್ದೇಶ ಸೇವಾ ಸಂಸ್ಥೆ, ಸಹಕಾರ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಥೆಯ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜು.22ರಂದು ಬೆಳಿಗ್ಗೆ ಕಲಾಮಂದಿರದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ತುಂಬಲ ರಾಮಣ್ಣ ತಿಳಿಸಿದರು.

ಸಹಕಾರ ಸಂಘದ ಸದಸ್ಯತ್ವ ಅಭಿಯಾನಕ್ಕೆ ಸಂಸದ ಆರ್.ಧ್ರುವನಾರಾಯಣ್, ಅಂತರ್ಜಾಲಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಚಲನೆ ನೀಡುವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಅಧ್ಯಕ್ಷತೆ ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಪ್ರತಿಭಾ ಪುರಸ್ಕಾರ ವಿತರಿಸುವರು. ಮಾಜಿ ಸಚಿವ ನರೇಂದ್ರಸ್ವಾಮಿ, ಚಾಮರಾಜನಗರ ಜಿಪಂ ಅಧ್ಯಕ್ಷೆ ಶಿವಮ್ಮ ಕೃಷ್ಣ, ಮಾಜಿ ಅಧ್ಯಕ್ಷೆ ಪುಷ್ಪಾ ಅಮರನಾಥ್ ಇನ್ನಿತರರು ಭಾಗವಹಿಸುವರು.

ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಯಲ್ಲಿ ಶೇ.85ರಷ್ಟು ಅಂಕ ಪಡೆದ ಪರಿಶಿಷ್ಟ ಜಾತಿ, ಪಂಗಡದ 500 ವಿದ್ಯಾರ್ಥಿಗಳಿಗೆ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು. ಸಂಘದ ಪದಾಧಿಕಾರಗಳಾದ ಎನ್.ನಾಗಯ್ಯ, ಗಿರೀಶ್ ಮಾಚಳ್ಳಿ, ಪ್ರಕಾಶ್, ಸೋಮರಾಜು, ಮನೋಹರ್ ಇದ್ದರು.

Translate »