ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟ
ಕೊಡಗು

ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿ ಪ್ರಕಟ

October 5, 2018

ಮಡಿಕೇರಿ:  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ-2018ರ ಸಂಬಂಧ ಪ್ರಕೃತಿ ವಿಕೋಪದಿಂದಾಗಿ ಮಧ್ಯಂತರದಲ್ಲಿ ಸ್ಥಗಿತಗೊಳಿಸಲಾಗಿದ್ದ ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಯ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದೆ.

ಅ.16 ರಂದು ಜಿಲ್ಲಾಧಿಕಾರಿ ಅವರು ಪರಿಷ್ಕøತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ಅಂದೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.17 ರಂದು ನಾಮಪತ್ರ ಪರಿಶೀಲಿಸುವ ಕಾರ್ಯ ನಡೆಯಲಿದೆ. ಅ.20 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ. ಅ.28 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಯಲಿದೆ. ಅ.30 ರಂದು ಮರು ಮತದಾನ ಇದ್ದಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಅ.31 ರಂದು ಮತ ಎಣಿಕೆಯು ಬೆಳಗ್ಗೆ 8 ಗಂಟೆಯಿಂದ ಆಯಾಯ ತಾಲೂಕು ಕೇಂದ್ರ ಗಳಲ್ಲಿ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎಸ್.ಉಮೇಶ್ ತಿಳಿಸಿದ್ದಾರೆ. ಈಗಾಗಲೇ ನೀಡಿರುವ ನಿರ್ದೇಶನಗಳಂತೆ, ಚುನಾವಣೆ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಯ ವಾರ್ಡ್‍ಗಳಿಗೆ ಸಂಬಂಧಿಸಿದಂತೆ ಹಾಲಿ ಚಾಲ್ತಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ತಯಾ ರಿಸಲಾಗಿರುವ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು.

ಈಗಾಗಲೇ ನಾಮಪತ್ರ ಸಲ್ಲಿಸಿರುವವರು ಪುನಃ ನಾಮಪತ್ರ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ, ನಾಮಪತ್ರಗಳ ಪರಿಶೀಲನಾ ಸಂದರ್ಭದಲ್ಲಿ ಆಗಸ್ಟ್ 10 ರಿಂದ ಆಗಸ್ಟ್ 16ರ ವರೆಗೆ ಸ್ವೀಕೃತವಾಗಿರುವ ನಾಮಪತ್ರಗಳನ್ನು ಪರಿಶೀಲನೆಗೆ ಒಳಪಡಿ ಸುವುದು, ಉಳಿದಂತೆ ಸೂಚನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎಸ್.ಉಮೇಶ ತಿಳಿಸಿದ್ದಾರೆ.

Translate »