ಕಬ್ಬಹಳ್ಳಿ ಕಾಲೇಜಿನಲ್ಲಿ ವಾರ್ಷಿಕ ಸಂಚಿಕೆ ಬಿಡುಗಡೆ
ಚಾಮರಾಜನಗರ

ಕಬ್ಬಹಳ್ಳಿ ಕಾಲೇಜಿನಲ್ಲಿ ವಾರ್ಷಿಕ ಸಂಚಿಕೆ ಬಿಡುಗಡೆ

October 5, 2018

ಬೇಗೂರು:  ಸಮೀಪದ ಕಬ್ಬಹಳ್ಳಿ ಗ್ರಾಮದ ಶ್ರೀ ಮದ್ದಾನೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಮತ್ತು ಪಾರಿಜಾತ ವಾರ್ಷಿಕ ಸಂಚಿಕೆ ಬಿಡುಗಡೆ ಸಮಾರಂಭವನ್ನು ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಉದ್ಟಾಟಿಸಿದರು. ನಂತರ ಮಾತನಾಡಿ, ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಸಮರ್ಪಕವಾದ ಮೂಲಭೂತ ಸೌಲಭ್ಯಗಳು ಇರುವುದಿಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಸೌಲಭ್ಯಗಳು ದೊರಕುವುದು ಕಷ್ಟಕರವಾಗಿರುತ್ತದೆ. ಆದರೆ ನಮ್ಮ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಮುಂದುವರೆದಿದ್ದು ಉತ್ತಮ ರೀತಿಯ ಕಟ್ಟಡಗಳನ್ನು ಹೊಂದಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ ಕಾಲೇಜಿಗೆ ಹೆಸರು ತನ್ನಿ ಎಂದರು. ಸರ್ಕಾರಿ ಸಂಸ್ಥೆಗಳು ಕೂಡ ಖಾಸಗಿಯವರ ಮಟ್ಟಕ್ಕೆ ಸೌಲಭ್ಯ ನೀಡಲು ಪ್ರಯತ್ನಿಸಿರುವುದು ಉತ್ತಮ ಬೆಳವಣಿಗೆ. ಈ ಹಿಂದೆ ಕಾಲೇಜುಗಳು ತಾಲೂಕು ಮಟ್ಟದಲ್ಲಿ ಮಾತ್ರ ಇದ್ದು ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸವನ್ನು ನಿಲ್ಲಿಸುವಂತೆ ಆಗಿತ್ತು. ಈಗÀ ಪ್ರತಿ ಹೋಬಳಿ ಮಟ್ಟದಲ್ಲಿ ಕಾಲೇಜು ಇರುವುದರಿಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಿದೆ ಎಂದರು.

ಈ ಸಂದರ್ಭದಲ್ಲಿ ತಾಪಂ ಸದಸ್ಯ ರೇವಣ್ಣ, ಗ್ರಾಪಂ ಅಧ್ಯಕ್ಷ ಮಹದೇವೇಗೌಡ, ಸಾಹಿತಿ ಮಲೆಯೂರು ಗುರುಸ್ವಾಮಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್‍ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಎನ್.ಎಸ್. ಮಹದೇವಪ್ರಸಾದ್ ಹಾಗೂ ಉಪನ್ಯಾಸಕರಾದ ಶಿವಪ್ರಸಾದ್, ಪ್ರಭುಸ್ವಾಮಿ, ಆರ್ ಮಹದೇವಸ್ವಾಮಿ, ಶಿವಕುಮಾರ್, ದಿವ್ಯ ಭಾರತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರುಗಳು ಹಾಜರಿದ್ದರು.

Translate »