ವಿವಿಧ ಸಂಘಗಳ ವಾರ್ಷಿಕ ಸಭೆ
ಮೈಸೂರು

ವಿವಿಧ ಸಂಘಗಳ ವಾರ್ಷಿಕ ಸಭೆ

September 21, 2018

ಮೈಸೂರು: ಮೈಸೂರಿನ ವಿಶ್ವಮಾನವ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಸೆ.23ರಂದು ಬೆಳಿಗ್ಗೆ 11.30ಕ್ಕೆ ನರಸೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಜಯ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯ ಕಾಲೇಜು ಅಧ್ಯಾಪಕರ ಹಾಗೂ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಸೆ.25 ರಂದು ಬೆಳಿಗ್ಗೆ 11 ಗಂಟೆಗೆ ತ್ಯಾಗರಾಜ ರಸ್ತೆಯ ಅರಸು ಮಂಡಳಿ ಸಂಘದಲ್ಲಿ ಏರ್ಪಡಿಸಲಾಗಿದೆ.

ಮೈಸೂರು ನಗರ ಮಹಿಳಾ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯನ್ನು ಸೆ.22ರಂದು ಮಧ್ಯಾಹ್ನ 3 ಗಂಟೆಗೆ ಕುವೆಂಪುನಗರದ ಸಂಘದ ಕಚೇರಿ ಆವರಣದಲ್ಲಿ ಏರ್ಪಡಿಸಿದೆ.

Translate »