ದೇಶದ ಮತ್ತೊಂದು ಮೈಲುಗಲ್ಲು:  162 ಕೋಟಿ ಡೋಸ್ ನೀಡಿಕೆ
News

ದೇಶದ ಮತ್ತೊಂದು ಮೈಲುಗಲ್ಲು: 162 ಕೋಟಿ ಡೋಸ್ ನೀಡಿಕೆ

January 24, 2022

ನವದೆಹಲಿ, ಜ.23- ಕೋವಿಡ್-19 ಸಾಂಕ್ರಾಮಿಕ ವಿರುದ್ಧದ ಲಸಿಕಾ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ಸಾಧಿಸಿದೆ. ಭಾನುವಾರ ದವರೆಗೂ ದೇಶಾದ್ಯಂತ 162 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಬಳಕೆ ಯಾಗದ ಸುಮಾರು 13,32, 44,836 ಡೋಸ್ ಲಸಿಕೆ ಲಭ್ಯವಿರುವುದಾಗಿ ಹೇಳಿದೆ. ಇಲ್ಲಿಯವರೆಗೂ 1,61,47,69,885 ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ದರದ ಮಾರ್ಗಗಳು ಹಾಗೂ ರಾಜ್ಯಗಳು ನೇರವಾಗಿ ಖರೀದಿಸುವ ವಿಧಾನದ ಮೂಲಕ ಪೂರೈಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಭಾರತದಲ್ಲಿ ಜನವರಿ 16ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯ ವರೆಗೂ 1,61,92,84,270 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

Translate »