ಮತ್ತೊಂದು ನಾಮಪತ್ರ ಸಲ್ಲಿಸಿದ ಪರಿಮಳಾ
ಚಾಮರಾಜನಗರ

ಮತ್ತೊಂದು ನಾಮಪತ್ರ ಸಲ್ಲಿಸಿದ ಪರಿಮಳಾ

April 25, 2018

ಕೊಳ್ಳೇಗಾಲ: ಹನೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ಇಂದು ಮತ್ತೊಂದು ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ಅವರ ಪುತ್ರ ಡಾ.ಪ್ರೀತನ್ ನಾಗಪ್ಪ ಅವರು ಬಿಜೆಪಿಯಿಂದ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಪರಿಮಳಾ ನಾಗಪ್ಪ ಅವರು ಸಹಾ ನಾಮಪತ್ರ ಸಲ್ಲಿಸಿದ್ದರು. ಪುನಃ ಮಂಗಳ ವಾರ ಚುನಾವಣಾಧಿಕಾರಿಗಳಿಗೆ ಮತ್ತೊಂದು ನಾಮಪತ್ರ ಸಲ್ಲಿಸಿದ್ದಾರೆ.

ಒಗ್ಗೂಡಿ ಚರ್ಚೆಸಿದ ಪರಿಮಳಾ-ವಿಷ್ಣು: ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿ ಹೊರಬಂದ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ನಾಮಪತ್ರ ಸಲ್ಲಿಸಲು ಆಗಮಿಸಿದ್ದೆ ವಿಷ್ಣುಕುಮಾರ್ ಜೊತೆ ಕೆಲಕಾಲ ಚಿರ್ಚಸಿ ಉಭಯ ಕುಶಲೋಪರಿ ವಿಚಾರಿಸಿದರು. ವಿಷ್ಣುಕುಮಾರ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದವರು. ಪರಿಮಳಾ ನಾಗಪ್ಪ ಅವರು ತಮ್ಮ ಪುತ್ರನಿಗೆ ಟಿಕೆಟ್ ಸಿಕ್ಕ ಹಿನ್ನೆಲೆ ಅವರನ್ನ ಸಮಾಧಾನ ಪಡಿಸಲು ಯತ್ನಿಸಿದ್ದರು. ಆದರೆ ವಿಷ್ಣುಕುಮಾರ್ ಸಿಕ್ಕಿರಲಿಲ್ಲ ಎನ್ನಲಾಗಿದೆ. ಆದರೆ ಇಂದು ನಾಮಪತ್ರ ಸಲ್ಲಿಕೆ ವೇಳೆಯಲ್ಲಿ ಇಬ್ಬರು ನಾಯಕರು ಮುಖಾಮುಖಿಯಾಗಿ ಮಾತುಕತೆ ಈಗ ಚರ್ಚೆಯ ಕೇಂದ್ರಬಿಂದುವಾಗಿದೆ.

Translate »