ಮೈಸೂರು, ಡಿ.8(ಎಸ್‍ಪಿಎನ್)- ಒಂದೇ ಸ್ಥಳದಲ್ಲಿ 10-15 ವರ್ಷ ಪೂರೈಸಿದರೂ ವರ್ಗಾವಣೆ ಭಾಗ್ಯವಿಲ್ಲದೆ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸುವ ಸರ್ಕಾರಿ ಶಾಲಾ ಶಿಕ್ಷಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವಂತೆ ರಾಜ್ಯ ಸರ್ಕಾರವನ್ನು ಜನ ಸಂಗ್ರಾಮ ಪರಿಷತ್ ಒತ್ತಾಯಿಸಿದೆ.
ಮೈಸೂರು ಜಿಲ್ಲೆಯ ಹಾಡಿ ಶಾಲೆಯೊಂದರಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಯೊ ಬ್ಬರು ವರ್ಗಾವಣೆ ಸಿಗದಿರುವುದರಿಂದ ಆರೋಗ್ಯ ಸಮಸ್ಯೆಗೆ ಸಿಲುಕಿ ಸ್ವಯಂ ನಿವೃತ್ತಿ ಪಡೆದಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಅಲ್ಲದೆ, ಇದೇ ಹಾದಿಯನ್ನು ಹಲವು ಶಿಕ್ಷಕಿಯರು ತುಳಿದಿದ್ದು, ಶಿಕ್ಷಕರ ಈ ನಿರ್ಧಾರ ದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣ ಮುಂದಿನ ದಿನಗಳಲ್ಲಿ ಡೋಲಾಯಾಮಾನವಾಗಲಿದೆ ಎನ್ನು ತ್ತಾರೆ ರಾಜ್ಯ ಉಪಾಧ್ಯಕ್ಷ ಪ್ರಸನ್ನ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆ ವ್ಯಾಪ್ತಿಯಲ್ಲಿ 10-15 ವರ್ಷ ಕಳೆದರೂ ವರ್ಗಾವಣೆ ಸಿಗದ ಶಿಕ್ಷಕ-ಶಿಕ್ಷಕಿಯ ಕೆಲ ಕುಟುಂಬಗಳಲ್ಲಿ ಕೌಟುಂಬಿಕ ಕಲಹ, ಬಂಜೆತನ ಸಮಸ್ಯೆ ಹಾಗೂ ವಿಚ್ಛೇ ದನ ಪ್ರಕರಣಗಳು ಹೆಚ್ಚಾಗುತ್ತಿರುವ ಅಂಶ ಆರ್‍ಟಿಐ ಮಾಹಿತಿಯಿಂದ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾ ದ್ಯಂತ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸುವ ಶಿಕ್ಷಕರ ಸಂಖ್ಯೆ ಅದರಲ್ಲೂ ಶಿಕ್ಷಕಿಯರ ಸಂಖ್ಯೆ ಇನ್ನೂ ಹೆಚ್ಚಾ ಗುವÀ ಸಂಭವವಿದೆ ಎಂದು ಶಿಕ್ಷಣ ಇಲಾಖೆಯ ಅಧಿ ಕಾರಿಗಳೇ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಈ ಸಂಬಂಧ ಜನ ಸಂಗ್ರಾಮ ಪರಿಷತ್ ಸೇರಿದಂತೆ ಇತರೆ ಸಂಘಟನೆಗಳು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ, ಗ್ರಾಮೀಣ ಪ್ರದೇಶದಲ್ಲಿನ ಶಿಕ್ಷಕರು ಮತ್ತು ಸರ್ಕಾರಿ ಶಾಲೆ ಗಳ ಸ್ಥಿತಿಗತಿಗಳ ಬಗ್ಗೆ ವಿವರವಾದ ವರದಿ ಸಲ್ಲಿಸಲಾಗಿದೆ. ಅಲ್ಲದೆ, ಜನ ಸಂಗ್ರಾಮ್ ಪರಿಷತ್ ಸದಸ್ಯರು, ತಜ್ಞರ ತಂಡ ರಚಿಸಿಕೊಂಡು ಹಾಡಿ ಮತ್ತು ಗಡಿ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ವಿದ್ಯಾರ್ಥಿ ಗಳ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಅಧ್ಯಯನ ನಡೆಸಿ, ಅಲ್ಲಿನ ಸಮಸ್ಯೆಗಳನ್ನೂ ಸಚಿವರಿಗೆ ಮನದಟ್ಟು ಮಾಡಿಕೊಡ ಲಾಗಿದೆ ಎಂದು `ಮೈಸೂರು ಮಿತ್ರ’ನಿಗೆ ಮಾಹಿತಿ ನೀಡಿದರು.
ಒಮ್ಮೆ ಅವಕಾಶ ಕೊಡಿ: `ಸಿ’ ವಲಯದ ಸರ್ಕಾರಿ ಪ್ರಾಥ ಮಿಕ ಶಾಲೆಗಳಲ್ಲಿ 10-15 ವರ್ಷಗಳಿಂದ ಕರ್ತವ್ಯ ನಿರ್ವ ಹಿಸುತ್ತಿರುವ ಶಿಕ್ಷಕರಿಗೆ, ಹಿಂದಿನ ವರ್ಷ ಹೆಚ್ಚುವರಿ/ಕಡ್ಡಾಯ ವರ್ಗಾವಣೆಯಲ್ಲಿ ವರ್ಗಾವಣೆಗೊಂಡಿದ್ದ ಶಿಕ್ಷಕರಿಗೆ ವಿನಾಯಿತಿ ನೀಡಿದಂತೆ ಈ ಶಿಕ್ಷಕರಿಗೂ ಒನ್ ಟೈಮ್ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.