ಕೊಟ್ಟಗೇರಿಯಲ್ಲಿ ಹುಲಿ ಹೆಜ್ಜೆ ಪತ್ತೆ ಗ್ರಾಮಸ್ಥರಲ್ಲಿ ಆತಂಕ
ಕೊಡಗು

ಕೊಟ್ಟಗೇರಿಯಲ್ಲಿ ಹುಲಿ ಹೆಜ್ಜೆ ಪತ್ತೆ ಗ್ರಾಮಸ್ಥರಲ್ಲಿ ಆತಂಕ

November 17, 2018

ಗೋಣಿಕೊಪ್ಪಲು: ಕೊಟ್ಟಗೇರಿ ಗ್ರಾಮದ ಗದ್ದೆಯಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ಅರಮಣಮಾಡ ಸತೀಶ್ ದೇವಯ್ಯ ಎಂಬುವರ ಗದ್ದೆಯಲ್ಲಿ ಕಳೆದ ರಾತ್ರಿ ಹುಲಿ ಓಡಾಟ ನಡೆಸಿರುವ ಹೆಜ್ಜೆ ಗುರುತು ಪತ್ತೆಯಾಗಿದೆ. ಹಲವು ತಿಂಗಳಿನಿಂದ ಈ ಭಾಗದಲ್ಲಿ ಹುಲಿಯ ಓಡಾಟ ಹೆಚ್ಚಾಗಿದ್ದು, ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಸುತ್ತಾ ಬರು ತ್ತಿದೆ. ಮತ್ತೆ ಹೆಜ್ಜೆ ಗುರುತು ಪತ್ತೆಯಾ ಗಿರುವುದು ಗ್ರಾಮಸ್ಥರಲ್ಲಿ ಭಯ ಮೂಡಿ ಸಿದೆ. ಈ ಬಗ್ಗೆ ಪೊನ್ನಂಪೇಟೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

Translate »