ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಶಾಸಕ ಅಪ್ಪಚ್ಚು ರಂಜನ್, ಅಧಿಕಾರಿಗಳ ವೀಡಿಯೋ ಕಾನ್ಫರೆನ್ಸ್
ಕೊಡಗು

ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಶಾಸಕ ಅಪ್ಪಚ್ಚು ರಂಜನ್, ಅಧಿಕಾರಿಗಳ ವೀಡಿಯೋ ಕಾನ್ಫರೆನ್ಸ್

April 25, 2020

ಸೋಮವಾರಪೇಟೆ,ಏ.24-ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಇಂದು ವೀಡಿಯೋ ಕಾನ್ಫರೆನ್ಸ್ ನಡೆಸಲಾಯಿತು.

ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿದ್ದ ಶಾಸಕ ಅಪ್ಪಚ್ಚು ರಂಜನ್ ಸಚಿವರೊಂ ದಿಗೆ ಮಾತನಾಡಿ, ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ನದಿ ಪಾತ್ರದಲ್ಲಿ ತುಂಬಿರುವ ಹೂಳನ್ನು ಮೇಲೆತ್ತಲು ಎನ್‍ಆರ್‍ಇಜಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಅವಕಾಶವಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿ ಸಿದ ಸಚಿವ ಕೆ.ಎಸ್.ಈಶ್ವರಪ್ಪ, ನದಿಪಾತ್ರದಲ್ಲಿ ತುಂಬಿರುವ ಹೂಳನ್ನು ತೆಗೆಯಲು ಉದ್ಯೋಗಖಾತ್ರಿ ಯೋಜನೆ ಯಡಿ ಕಾಮಗಾರಿ ಕೈಗೊಳ್ಳಬಹುದಾಗಿದೆ ಎಂದರು.

ನಂತರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಕೋವಿಡ್-19 ಮುಂಜಾ ಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕೆಲಸ ನಿರ್ವಹಿಸ ಬೇಕು. ಕಾಮಗಾರಿಯ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಜಿಲ್ಲಾಡಳಿತ ನೀಡಿರುವ ಸೂಚನೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿ ಸಿದರು. ಇದೇ ವೇಳೆ ಕಾಮಗಾರಿಗೆ ಅಗತ್ಯವಾಗಿರುವ ಸಾಮಗ್ರಿಗಳಿಗಾಗಿ ಕ್ರಷರ್ ಗಳನ್ನು ಚಾಲನೆ ಮಾಡಲು ಹಾಗೂ ಪಿರಿಯಾಪಟ್ಟಣ ದಿಂದ ಎಂ-ಸ್ಯಾಂಡ್ ಸಾಗಿಸಲು ಅವಕಾಶ ಕಲ್ಪಿ ಸುವಂತೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ದೂರವಾಣಿ ಮೂಲಕ ಮನವಿ ಮಾಡಿದರು. ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿಗಳು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವದಾಗಿ ಭರವಸೆ ನೀಡಿದರು. ಸಭೆಯಲ್ಲಿ ತಾಪಂ ಇಓ ಸುನಿಲ್ ಸೇರಿದಂತೆ ವಿವಿಧ ಇಲಾಖಾ ಧಿಕಾರಿಗಳು ಉಪಸ್ಥಿತರಿದ್ದರು.

Translate »