ರಾಜಾಸೀಟು ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಶಾಸಕ ಅಪ್ಪಚ್ಚುರಂಜನ್
ಕೊಡಗು

ರಾಜಾಸೀಟು ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಶಾಸಕ ಅಪ್ಪಚ್ಚುರಂಜನ್

August 14, 2021

ಮಡಿಕೇರಿ, ಆ.13- ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯ ರಾಜಾಸೀಟಿನಲ್ಲಿ ನಡೆಯು ತ್ತಿರುವ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಶುಕ್ರ ವಾರ ಪರಿಶೀಲಿಸಿದರು. ರಾಜಾಸೀಟಿನ ಪಾಥ್ ವೇ ಹಾಗೂ ವೀಕ್ಷಣಾ ಗೋಪುರ ಸ್ಥಳ ಸೇರಿದಂತೆ ಹಲವು ಕಾಮಗಾರಿ ಗಳನ್ನು ವೀಕ್ಷಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾ ಡಿದ ಅವರು, 3.43 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲಾಗಿದೆ. ಜೆಸಿಬಿ ಬಳಸದೆ ಸ್ವಾಭಾವಿಕವಾಗಿ ಕಾಮಗಾರಿ ಕೈಗೊಳ್ಳಲಾಗಿದ್ದು, ಸರ್ಕಾರದಿಂದ ಇನ್ನೂ 3 ಕೋಟಿ ರೂ. ಬಿಡುಗಡೆ ಮಾಡಿಸಲಾಗು ವುದು ಎಂದು ಶಾಸಕರು ತಿಳಿಸಿದರು.

ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ರಾಗಿದ್ದ ಸಂದರ್ಭದಲ್ಲಿ ರಾಜಾಸೀಟಿನಲ್ಲಿ ನೂತನ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮಾಡಿಸಲಾಗಿತ್ತು. ಆದರೆ ನಾನಾ ಕಾರಣಗಳಿಂದ ಕಾಮಗಾರಿ ಕೈಗೊಳ್ಳಲು ತಡವಾಗಿತ್ತು, ಈಗ ಕಾಮಗಾರಿ ನಡೆಯು ತ್ತಿದ್ದು, ರಾಜಾಸೀಟಿಗೆ ಯಾವುದೇ ರೀತಿ ಧಕ್ಕೆಯಾಗದಂತೆ ಸ್ವಾಭಾವಿಕವಾಗಿ ಕಾಮಗಾರಿ ಕೈಗೊಳ್ಳಲಾಗಿದೆ. ಈಗಾಗಲೇ 3 ಎಕರೆ ಯಲ್ಲಿ ರಾಜಾಸೀಟು ಇದ್ದು, ಮುಂದುವರೆದು 6 ಎಕರೆ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಕೊರೊನಾ ಪೂರ್ವ ಸಂದರ್ಭದಲ್ಲಿ ರಾಜಾಸೀಟಿಗೆ ಶನಿವಾರ ಮತ್ತು ಭಾನುವಾರ ಗಳಂದು ಮೂರು ನಾಲ್ಕು ಸಾವಿರ ಪ್ರವಾಸಿ ಗರು ಆಗಮಿಸುತ್ತಿದ್ದರು. ಪ್ರವಾಸಿಗರನ್ನು ಇನ್ನಷ್ಟು ಆಕರ್ಷಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿ ಸಹಕಾರಿಯಾಗಲಿದೆ. ರಾಜಾ ಸೀಟಿನಲ್ಲಿ ನಡೆದು ಪ್ರಾಕೃತಿಕ ಸೌಂದರ್ಯ ವನ್ನು ವೀಕ್ಷಿಸಬಹುದಾಗಿದೆ. ನಾಪೋಕ್ಲು ಮತ್ತು ವಿರಾಜಪೇಟೆವರೆಗೂ ಪ್ರಾಕೃತಿಕ ಸೌಂದರ್ಯ ಕಾಣಲಿದೆ ಎಂದು ಅಪ್ಪಚ್ಚು ರಂಜನ್ ಅವರು ಹೇಳಿದರು.

ರಾಜಾಸೀಟು ವ್ಯೂ ಪಾಯಿಂಟ್‍ಗಳಿಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಹೆಸರು ಇಡುವ ಸಂಬಂಧ ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗು ವುದು ಎಂದು ಶಾಸಕರು ಹೇಳಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್.ಶಶಿಧರ ಮಾಹಿತಿ ನೀಡಿ, ಹಾಲಿ ಇರುವ ರಾಜಾಸೀಟು ಉದ್ಯಾನವನ, ಹೊಸ ದಾಗಿ ನಿರ್ಮಾಣವಾಗುತ್ತಿರುವ ಉದ್ಯಾ ನವನ ಮತ್ತು ರೈಲ್ವೆ ವಿಭಾಗದ ಸುತ್ತಲಿನ ಜಾಗ ಸೇರಿದಂತೆ ‘ಗ್ರೇಟರ್ ರಾಜಾಸೀಟು’ ಅಭಿವೃದ್ಧಿ ಕಾಮಗಾರಿಗೆ ಕ್ರಮವಹಿಸ ಲಾಗಿದೆ ಎಂದು ತಿಳಿಸಿದರು.

ಹಿರಿಯ ಸಹಾಯಕ ನಿರ್ದೇಶಕರಾದ ಪ್ರಮೋದ್, ಲೋಕೋಪಯೋಗಿ ಇಲಾಖೆ ಎಇಇ ಶಿವರಾಮ್, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಸಹಾಯಕ ನಿರ್ದೇಶಕ ರಾದ ವರದರಾಜು, ಇತರರು ಇದ್ದರು.

 

 

Translate »