ಮಾದಪ್ಪನ ಬೆಟ್ಟ ಅಭಿವೃದ್ಧಿಗೆ ಸಹಕರಿಸಲು ಮನವಿ

ಹನೂರು, ಜು.14(ಸೋಮು)- ತಾಲೂ ಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಬುಧವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಡಾ.ಎಂ. ಆರ್.ರವಿ ಅವರನ್ನು ಶ್ರೀಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿ, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶ್ರೀಮಲೆ ಮಹದೇಶ್ವರಸ್ವಾಮಿ ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಭಿವೃ ದ್ಧಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು.

ಮಾದಪ್ಪನ ದೇವಸ್ಥಾನವು ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿರುವ ದೇಗುಲಗಳ ಪೈಕಿ ಒಂದಾಗಿದ್ದು, ಇಲ್ಲಿಗೆ ರಾಜ್ಯ ಸೇರಿದಂತೆ ತಮಿಳುನಾಡಿನಿಂದ ಮಹಾಶಿವರಾತ್ರಿ, ದೀಪಾವಳಿ, ಯುಗಾದಿ ಹಾಗೂ ಇನ್ನಿತರೆ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಈ ದಿಸೆಯಲ್ಲಿ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ಆಡಳಿತ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಉತ್ತಮ ಸೇವೆ ನೀಡಲಾಗುತ್ತಿದೆ ಎಂದರು.
ಪ್ರಾಧಿಕಾರದ ನೌಕರರ ಕ್ಷೇಮಾಭಿವೃದ್ಧಿ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಸಂತಸದ ವಿಷಯ. ಆಗಾಗಿ ಸಂಘದ ಪದಾಧಿ ಕಾರಿಗಳು ಒಗ್ಗಟ್ಟಿನಿಂದ ಕಾರ್ಯ ನಿರ್ವ ಹಿಸುವುದರ ಮೂಲಕ ಸಂಘದ ಅಭಿ ವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಇದರ ಜೊತೆಗೆ ಮ.ಬೆಟ್ಟದ ಅಭಿವೃದ್ಧಿಗೆ ಸಹ ಕಾರ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಪ್ರಧಾನ ಕಾರ್ಯದರ್ಶಿ ಸ್ವಾಮಿ, ಸಹ ಕಾರ್ಯದರ್ಶಿ ಮಾದೇಶ್, ಭದ್ರತಾ ನೌಕರರ ಮುಖ್ಯಸ್ಥ ಮಹದೇವ ಸ್ವಾಮಿ ಹಾಗೂ ಇನ್ನಿತರರು ಹಾಜರಿದ್ದರು.