ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಜಿಲ್ಲಾಡಳಿತದೊಂದಿಗೆ ಸಹಕರಿಸಲು ಮನವಿ
ಮೈಸೂರು

ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಜಿಲ್ಲಾಡಳಿತದೊಂದಿಗೆ ಸಹಕರಿಸಲು ಮನವಿ

April 5, 2020

ಮೈಸೂರು, ಏ.4(ಎಸ್‍ಬಿಡಿ)- ಕೊರೊನಾ ನಿಯಂತ್ರಣಕ್ಕೆ ಅವಿರತವಾಗಿ ಶ್ರಮಿಸುತ್ತಿರುವ ಮೈಸೂರು ಜಿಲ್ಲಾಡಳಿತಕ್ಕೆ ಪ್ರತಿಯೊಬ್ಬರೂ ಸಹಕರಿಸ ಬೇಕೆಂದು ಮಾಜಿ ಮೇಯರ್ ಸಂದೇಶ್ ಸ್ವಾಮಿ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಕೋವಿಡ್-19 ಸೋಂಕಿ ತರ ಸಂಖ್ಯೆ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಅತ್ಯಂತ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ನೇತೃತ್ವ ದಲ್ಲಿ ಆರೋಗ್ಯ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮುದಾಯ ರಕ್ಷಣೆಗೆ ಹಗಲಿ ರುಳು ಕೆಲಸ ಮಾಡುತ್ತಿದ್ದಾರೆ. ರೋಗಿಗಳ ಗುಣಪಡಿಸಲು ವೈದ್ಯರು ಅಪಾಯ ಲೆಕ್ಕಿಸದೆ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಿರುವಾಗ ಎಲ್ಲರೂ ಸಹಕಾರ ನೀಡುವುದು ಅವರ ಜವಾಬ್ದಾರಿ ಆಗಿದೆ ಎಂದು ಹೇಳಿಕೆ ನೀಡಿದ್ದಾರೆ. ಜನ ಭೀತಿಯಲ್ಲಿರುವ ಸ್ಥಿತಿಯಲ್ಲಿ ರಾಜಕೀಯ ನಾಯಕರು, ಮುಖಂಡರು ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸ್ಥಿತಿಗತಿ ಬಗ್ಗೆ ತಮ್ಮದೇ ಆದ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸಬಾರದು. ಆಹಾರ, ಅಗತ್ಯ ವಸ್ತುಗಳ ಹಂಚುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು. ಲಾಕ್‍ಡೌನ್ ಸಂದರ್ಭದಲ್ಲಿ ಜನ ಅನಗತ್ಯವಾಗಿ ಓಡಾಡಬಾರದು. ಈ ಸಂದರ್ಭದಲ್ಲಿ ಧರ್ಮ, ರಾಜಕಾರಣ ಸುಳಿಯಬಾರದು. ನನಗೆ ಸೋಂಕು ತಗುಲಿದರೆ, ಕುಟುಂಬ ಸದಸ್ಯರು, ನಂತರ ಸಮುದಾಯಕ್ಕೆ ಹರಡುತ್ತದೆ ಎಂಬುದನ್ನು ಅರಿತುಕೊಳ್ಳಬೇಕು. ಒಟ್ಟಾರೆ ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ಹೋರಾಡುತ್ತಿರುವ ಜಿಲ್ಲಾಡಳಿತಕ್ಕೆ ಶಕ್ತಿ ತುಂಬಬೇಕೆಂದು ವಿನಮ್ರವಾಗಿ ಕೋರುತ್ತೇನೆ ಎಂದು ತಿಳಿಸಿದ್ದಾರೆ.

Translate »