ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶೀಘ್ರದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಕೆ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿಸೋಜಾ
ಮೈಸೂರು

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶೀಘ್ರದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಕೆ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿಸೋಜಾ

June 2, 2020

ಮೈಸೂರು, ಜೂ.1(ಪಿಎಂ)- ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲಿ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರದ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿಸೋಜಾ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ರಚಿಸಿ ದೊಡ್ಡ ಮಟ್ಟದ ಅನುದಾನ ನೀಡಿದ್ದರು. ಸಮಿತಿಯು ಚರ್ಚ್‍ಗಳ ದುರಸ್ತಿ, ಅಭಿವೃದ್ಧಿ ಸೇರಿದಂತೆ ಕೆಲ ಸೀಮಿತ ಕಾರ್ಯ ವ್ಯಾಪ್ತಿ ಹೊಂದಿರುವ ಹಿನ್ನೆಲೆಯಲ್ಲಿ ಸಮಗ್ರ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಪ್ರಸಕ್ತ ಸಾಲಿನ ಬಜೆಟ್‍ನಲ್ಲಿಯೂ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸಿಎಂ ಯಡಿ ಯೂರಪ್ಪ 200 ಕೋಟಿ ರೂ. ಮೀಸಲಿರಿಸಿದ್ದಾರೆ. ಅಲ್ಲದೆ, ಸಮುದಾಯದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಮುಖ್ಯಮಂತ್ರಿಗಳು ಸಂಪೂರ್ಣ ಸಹಕಾರ ನೀಡುತ್ತಿ ದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನಪರ ಕಾಳಜಿ ಹೊಂದಿದ್ದು, ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ರಾಜ್ಯಾದ್ಯಂತ ಕ್ರೈಸ್ತ ಸಮುದಾಯದಿಂದ ಬೆಂಬಲ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಸಮುದಾಯ ಮತ್ತಷ್ಟು ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿಸಲಿದೆ ಎಂದು ತಿಳಿಸಿದರು. ಬಿಜೆಪಿ ಹಾಗೂ ಸಮುದಾಯದ ಮುಖಂಡರಾದ ಡಾ.ಅನಿಲ್ ಥಾಮಸ್, ರೆ.ಫಾ.ಎಸ್.ಚಾಲ್ರ್ಸ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

Translate »