ಎಚ್ಚರಿಕೆಯಿಂದ ಮತ ಚಲಾಯಿಸಲು ಮನವಿ
ಮೈಸೂರು

ಎಚ್ಚರಿಕೆಯಿಂದ ಮತ ಚಲಾಯಿಸಲು ಮನವಿ

November 26, 2019

ಮೈಸೂರು,ನ.25(ಆರ್‍ಕೆಬಿ)- ದಲಿತರು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾ ತರು ಈ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಮತ ಹಾಕುವುದರಿಂದ ಸಾಮಾಜಿಕ ನ್ಯಾಯಕ್ಕೆ ಕೊಡಲಿ ಪೆಟ್ಟು ನೀಡುವಂತಾಗುವ ಕಾರಣ ಎಲ್ಲರೂ ಎಚ್ಚರಿಕೆಯಿಂದ ಮತ ಹಾಕುವಂತೆ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ರಾಜ್ಯಾಧ್ಯಕ್ಷ ಕೆ.ಸಿ. ಪುಟ್ಟಸಿದ್ದಶೆಟ್ಟಿ ಮನವಿ ಮಾಡಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಒಂದನೇ ತರಗತಿಯಿಂದ ಏಳನೇ ತರಗತಿವರೆಗಿನ ಹಿಂದುಳಿದ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನೂತನ ಸಾಲಿಗೆ ನಿಲ್ಲಿಸಲಾಗಿದೆ. ಶಿಕ್ಷಣ ಇಲಾಖೆ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಂಬಂಧಿಸಿದಂತೆ ಅವಹೇಳನಕಾರಿ ವಿಷಯವನ್ನು ವೆಬ್‍ಸೈಟ್‍ನಲ್ಲಿ ಹಾಕಿದ್ದರೂ ಮುಖ್ಯಮಂತ್ರಿಗೆ ಹೇಳಿ ಅದನ್ನು ಸರಿಪಡಿಸುವ ಕೆಲಸ ಅನರ್ಹ ಶಾಸಕರು ಮಾಡಲಿಲ್ಲ ಎಂದು ದೂರಿದರು. ನಾಮಧಾರಿ ಗೌಡರು ಮತ್ತು ಬಲಿಜಿಗ ಸಮುದಾಯಗಳನ್ನು 2ಎ ನಿಂದ ಕೈಬಿಡಲು ಈ ಅನರ್ಹ ಶಾಸಕರ ಒತ್ತಡವೇ ಕಾರಣ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳು ಜನಮನ್ನಣೆ ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಡಾ.ಮಧು, ಕರುಣಾಕರ್, ನಂದೀಶ್‍ರಾಜೇ ಅರಸ್, ಅರವಿಂದ ಶರ್ಮ, ಡಾ.ಪ್ರಸನ್ನ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Translate »