ಬಿಸಿಎಂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೈಸೂರು

ಬಿಸಿಎಂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

May 30, 2018

ಮೈಸೂರು: ಕೆ.ಆರ್.ನಗರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಕೆ.ಆರ್.ನಗರ ಟೌನ್ ಹೊಸ ಅಗ್ರಹಾರ, ಭೇರ್ಯ, ಹರದನಹಳ್ಳಿ, ಹನಸೋಗೆ, ಮಿರ್ಲೆ, ಮೇಲೂರು ಮತ್ತು ಕೆ.ಆರ್.ನಗರ ಟೌನ್ ಡಿ.ದೇವರಾಜ ಅರಸು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಕೆ.ಆರ್.ನಗರ ಟೌನ್‍ನಲ್ಲಿರುವ ಬಾಲಕರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹಿಂದುಳಿದ ವರ್ಗ-1, 2ಎ, 2ಬಿ, 3ಎ,3ಬಿ, ಎಸ್.ಸಿ. ಹಾಗೂ ಎಸ್.ಟಿ. ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಲೇಖನ ಸಾಮಗ್ರಿ, ನೋಟ್ ಪುಸ್ತಕ, ಸಮವಸ್ತ್ರ, ಬಟ್ಟೆ ಸೋಪು, ಮೈಸೋಪು, ಕೊಬ್ಬರಿ ಎಣ್ಣೆ, ಟೂತ್‍ಪೇಸ್ಟ್ ನೀಡಲಾಗುವುದು. ಪ್ರವೇಶ ಪಡೆಯಲು 5ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 44,500 ರೂ., ಪ್ರವರ್ಗ-1 ಹಾಗೂ ಎಸ್.ಸಿ., ಎಸ್.ಟಿ. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 1 ಲಕ್ಷ ರೂ. ಒಳಗಿರಬೇಕು. ಅರ್ಜಿಯನ್ನು ಸಂಬಂಧಿಸಿದ ವಿದ್ಯಾರ್ಥಿನಿಲಯಗಳಿಂದ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ ಜೂನ್ 20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿಸ್ತರಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೆ.ಆರ್.ನಗರ ತಾಲೂಕು ದೂರವಾಣ ಸಂಖ್ಯೆ 08223-262230 ಅನ್ನು ಸಂಪರ್ಕಿಸಿ.

Translate »