ಮೈಸೂರು, ಏ. 27- ಜೆಎಸ್‍ಎಸ್ ಮಹಾವಿದ್ಯಾಪೀಠದ ವತಿಯಿಂದ ನಡೆಸಲಾಗುತ್ತಿ ರುವ ಕ್ಯಾತನಹಳ್ಳಿ ಸಾಹುಕಾರ್ ಸಿದ್ದಲಿಂಗಯ್ಯನವರ ಅನಾಥಾಲಯಕ್ಕೆ 2018-19ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು 5 ರಿಂದ 10ನೇ ತರಗತಿವರೆಗೆ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ತಿಂಡಿ, ಊಟ-ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಅರ್ಜಿಯನ್ನು ವಿದ್ಯಾರ್ಥಿ ನಿಲಯದ ನಿಲಯ ಪಾಲಕರಿಂದ ಪಡೆದು ಮೇ 18ರೊಳಗೆ ತಲುಪಿಸಲು ಕೋರ ಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 9740597011 ಸಂಪರ್ಕಿಸಬಹುದು.