ಪೊಲೀಸ್ ದೂರು ಪ್ರಾಧಿಕಾರದ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ

ಪೊಲೀಸ್ ದೂರು ಪ್ರಾಧಿಕಾರದ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

September 29, 2018

ಚಾಮರಾಜನಗರ: ನಗರದಲ್ಲಿರುವ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರಕ್ಕೆ ನಾಗರಿಕ ಸೇವಾ ಸಮಾಜದಿಂದ ಹೊಸದಾಗಿ ಸದಸ್ಯರನ್ನು ನೇಮಕ ಮಾಡುವ ಪ್ರಕ್ರಿಯೆ ಜಾರಿ ಯಲ್ಲಿದ್ದು, ಸದಸ್ಯತ್ವಕ್ಕಾಗಿ ಅಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿದ್ದು, ಯಾವುದೇ ರಾಜಕೀಯ ಪಕ್ಷ ಅಥವಾ ಸೈದ್ದಾಂತಿಕ ಗುಂಪುಗಳ್ಲಿ ಗುರುತಿಸಿಕೊಂಡಿರಬಾರದು. ಸಮಾಜ ವಿರೋಧಿ ಅಥವಾ ರಾಷ್ಟ್ರೀಯ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬಾರದು. ಯಾವುದೇ ಸಂಜ್ಞೆ ಅಥವಾ ಅಸಂಜ್ಞೆಯ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿರಬಾರದು. ಶಿಕ್ಷಣ, ಆರೋಗ್ಯ ಹಾಗೂ ಹಿಂದುಳಿದ ವರ್ಗಗಳ ಉನ್ನತೀಕರಣ ಮತ್ತು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವವರಾಗಿಬೇಕು.
ಅಭ್ಯರ್ಥಿಯ ಸದಸ್ಯತ್ವದ ಅವಧಿ 3 ವರ್ಷಗಳಾಗಿದ್ದು, ಮುಂದಿನ ಅವಧಿಗೆ ಮುಂದುವರೆಸುವವರೆಗೆ ನಿಗದಿಪಡಿಸಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Translate »