ಪ್ರಶಸ್ತಿಗೆ ಅರ್ಜಿ ಆಹ್ವಾನ
ಮೈಸೂರು

ಪ್ರಶಸ್ತಿಗೆ ಅರ್ಜಿ ಆಹ್ವಾನ

July 9, 2018

ಮೈಸೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿ ಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಅತ್ಯುತ್ತಮ ಸೇವೆ ಸಲ್ಲಿಸಿರುವ ಇಬ್ಬರು ವ್ಯಕ್ತಿ ಹಾಗೂ ಎರಡು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಿದೆ.

ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರೂ. 25,000/-ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು ರೂ. 1.00 ಲಕ್ಷಗಳ ನಗದು ಬಹು ಮಾನ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಈ ಪ್ರಶಸ್ತಿಯನ್ನು ನ.14ರಂದು ಆಚರಿಸಲಾಗುವ ಮಕ್ಕಳ ದಿನಾಚರಣೆಯಂದು ನೀಡಲಾಗುವುದು. ಅರ್ಜಿ ಸಲ್ಲಿಸುವ ವ್ಯಕ್ತಿ/ಸಂಸ್ಥೆ, ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶ, ಮಕ್ಕಳ ಶಿಕ್ಷಣ, ಕಲೆ, ಸಂಸ್ಕೃತಿ, ಕ್ರೀಡೆ, ಅಭಿವೃದ್ದಿ, ವಿಶೇಷ ಮಕ್ಕಳು, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರಬೇಕು. ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಿ.ಎಸ್-1, ಹೈಟೆನ್ಷನ್ ಲೈನ್ ರಸ್ತೆ, ಕೃಷ್ಣದೇವರಾಯ ಸರ್ಕಲ್, ವಿಜಯನಗರ, 2ನೇ ಹಂತ, ಮೈಸೂರು ಇಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 20ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ: 2498031, 2495432 ಅನ್ನು ಸಂಪರ್ಕಿಸಬಹುದು.

Translate »