ಕಲಾವಿದರಿಂದ ಅರ್ಜಿ ಆಹ್ವಾನ
ಚಾಮರಾಜನಗರ

ಕಲಾವಿದರಿಂದ ಅರ್ಜಿ ಆಹ್ವಾನ

July 5, 2018

ಚಾಮರಾಜನಗರ:  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ಮಟ್ಟದಲ್ಲಿ ಪ್ರಾಯೋಜನೆಗಾಗಿ ಕಲಾ ತಂಡಗಳನ್ನು ಆಯ್ಕೆ ಮಾಡುವ ಸಲುವಾಗಿ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.

ಜಿಲ್ಲಾಮಟ್ಟದಲ್ಲಿ ಪ್ರಾಯೋಜನೆಗಾಗಿ ಕಲಾ ತಂಡಗಳನ್ನು ಆಯ್ಕೆ ಮಾಡುವಾಗ ಪಾರದರ್ಶಕತೆ ಕಾಪಾಡಿಕೊಂಡು ಕಲಾತಂಡಗಳಿಗೆ ಸಮಾನ ಅವಕಾಶಗಳನ್ನು ನೀಡಲಾಗುತ್ತದೆ. ಅರ್ಹತೆ ಹಾಗೂ ಪರಿಣಿತಿಯ ಆಧಾರದ ಮೇಲೆ ಗುರುತಿಸಿ ಪ್ರೋತ್ಸಾಹಿಸಲು ಕಲಾವಿದರಿಂದ ಅರ್ಜಿಗಳನ್ನು ಸ್ವೀಕರಿಸಲಿದೆ. ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ನಾಟಕ, ತತ್ವಪದ, ಜಾನಪದ ಸೇರಿದಂತೆ ಇತ್ಯಾದಿ ಕಲಾತಂಡಗಳ ಪ್ರಕಾರದ ಕಲಾವಿದರು ಅರ್ಜಿ ಸಲ್ಲಿಸಬಹುದು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರತಿನಿಧಿಗಳನ್ನು ಒಳಗೊಂಡ ಆಯ್ಕೆ ಸಮಿತಿಯ ಮೂಲಕ ಸಂದರ್ಶನ ನಡೆಸಿ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ತದನಂತರ ವರ್ಷಪೂರ್ತಿ ಆದ್ಯತಾ ಅನುಸಾರ ಪ್ರಾಯೋಜನೆ ಕಲ್ಪಿಸಲು ಉದ್ದೇಶಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜುಲೈ 14ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸದರಿ ಕಚೇರಿ ಅಥವಾ ದೂ.ಸಂಖ್ಯೆ 08226-222210 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಚನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »